ಕಟಪಾಡಿ (ಪಡುಬಿದ್ರಿ): ಕಟಪಾಡಿ ಗ್ರಾಪಂ ವ್ಯಾಪ್ತಿಯ ಶಿರ್ವ-ಬೆಳ್ಮಣ್ ರಾಜ್ಯ ಹೆದ್ದಾರಿಯಲ್ಲಿ ಹೋಲಿ ಕ್ರಾಸ್ ಬಳಿ ಚರಂಡಿ ವ್ಯವಸ್ಥೆ ಸರಿಪಡಿಸದೇ ಇರುವುದರಿಂದ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ವಾಹನ ಹಾಗೂ ಜನ ಸಂಚಾರಕ್ಕೆ ತೀರಾ ತೊಂದರೆ ಉಂಟಾಗುತ್ತಿದೆ.
ಇಲ್ಲಿರುವ ಚರಂಡಿ ಹೂಳು ತುಂಬಿ ಮುಚ್ಚಿ ಹೋಗಿವೆ. ಪರಿಣಾಮ ಮಳೆ ನೀರು ರಸ್ತೆಯಲ್ಲಿ ಹರಿದು ತಗ್ಗುಪ್ರದೇಶದಲ್ಲಿ ತುಂಬಿ ಬಿಡುತ್ತದೆ. ಈಗ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಹೋಳಿ ಕ್ರಾಸ್ ಬಳಿಯ ರಸ್ತೆ ಮುಳುಗಿವೆ. ಇಲ್ಲಿ ಸಂಚರಿಸುವ ಲಘು ಹಾಗೂ ದ್ವಿಚಕ್ರ ವಾಹನ ಸವಾರರು ಸಂಚರಿಸುವುದು ಸಮಸ್ಯೆಯಾಗಿದ್ದು, ಸಂಚಾರಕ್ಕೆ ತೊಡಕಾಗಿದೆ. ಸದಾ ವಾಹನ ಸಂಚಾರದಿಂದ ಕೂಡಿದ ಈ ರಸ್ತೆಯಲ್ಲಿ ಸಂಚರಿಸುವ ನೂರಾರು ವಿದ್ಯಾರ್ಥಿಗಳು ಕೂಡ ತೀರಾ ತೊಂದರೆ ಅನುಭವಿಸುತ್ತಿದ್ದಾರೆ.
ಸ್ಥಳೀಯರು ಪ್ರತಿವರ್ಷ ಈ ಸಮಸ್ಯೆಯನ್ನು ಸರಿಪಡಿಸುವಂತೆ ಸ್ಥಳೀಯ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸುತ್ತಿದ್ದರೂ ಏನೂ ಪ್ರಯೋಜನವಾಗಿಲ್ಲ. ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಮತ್ತು ಚಾಲಕರಿಗೆ ಇದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ನಾಗರಿಕರ ಆರೋಪ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.