ADVERTISEMENT

ಕೊಕ್ಕೊ: ಹೊಸಂಗಡಿ ಕಾಲೇಜು, ಎಸ್.ಎಂ.ಎಸ್.ಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2011, 8:05 IST
Last Updated 23 ಸೆಪ್ಟೆಂಬರ್ 2011, 8:05 IST

ಬ್ರಹ್ಮಾವರ: ಸ್ಥಳೀಯ ಎಸ್‌ಎಂಎಸ್ ಪ.ಪೂ. ಕಾಲೇಜು ಮತ್ತು ಹೊಸಂಗಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ತಂಡಗಳು, ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕೊಕ್ಕೊ ಟೂರ್ನಿ ಯಲ್ಲಿ ಕ್ರಮವಾಗಿ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡವು.

ಇಲ್ಲಿನ ಸರ್ಕಾರಿ ಪಿ.ಯು. ಕಾಲೇಜು ಕ್ರೀಡಾಂಗಣ ದಲ್ಲಿ ಹಮ್ಮಿಕೊಂಡಿದ್ದ ಕೊಕ್ಕೊ ಪಂದ್ಯಾಟವನ್ನು ಜಿ.ಪಂ. ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ  ಸೋಮವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, `ಎಳೆಯ ವಯಸ್ಸಿನಲ್ಲಿಯೇ ಕ್ರೀಡೆಯ ಬಗ್ಗೆ ಆಸಕ್ತಿ ಬೆಳೆಸಬೇಕು. ಇದರಿಂದ ಮಕ್ಕಳು ದೈಹಿಕವಾಗಿ ಮತ್ತು ಬೌದ್ಧಿಕವಾಗಿ ಬೆಳೆಯುತ್ತಾರೆ~ ಎಂದು ಹೇಳಿದರು.

ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಪ.ಪೂ ಇಲಾಖೆ ಉಪನಿರ್ದೇಶಕ ಎಸ್.ಎಸ್.ಶಿಂಧಾ, ಉದ್ಯಮಿ ರಾಜೀವ ಆಳ್ವ, ಜಿ.ಪಂ ಸದಸ್ಯೆ ಮಲ್ಲಿಕಾ ಬಾಲಕೃಷ್ಣ, ತಾ.ಪಂ ಸದಸ್ಯ ವಿಠಲ ಪೂಜಾರಿ, ವಾರಂಬಳ್ಳಿ ಗ್ರಾ.ಪಂ.ಅಧ್ಯಕ್ಷ ಎಸ್.ನಾರಾಯಣ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಘುಪತಿ ಬ್ರಹ್ಮಾವರ, ಕಾಲೇಜು ಅಭಿವೃದ್ಧಿ ಸಮಿತಿಯ ಭಾಸ್ಕರ್ ರೈ, ಪಿಯು ಕಾಲೇಜಿನ ಪ್ರಾಂಶುಪಾಲರಾದ ತಾರಾದೇವಿ, ಪ.ಪೂ ಶಿಕ್ಷಣ ಇಲಾಖೆಯ ಕ್ರೀಡಾ ಮೇಲ್ವಿಚಾರಕ ವಿಶ್ವನಾಥ ಬಾಯರಿ, ದೈಹಿಕ ಶಿಕ್ಷಕ ಮಂಜುನಾಥ್ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು,

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.