ಹೆಜಮಾಡಿ (ಪಡುಬಿದ್ರಿ): ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಪ್ರಥಮ ಬಾರಿಗೆ ಜಿಲ್ಲೆಗೆ ಆಗಮಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿ ಜಿಲ್ಲಾ ಗಡಿಭಾಗ ಹೆಜಮಾಡಿಯಲ್ಲಿ ಸ್ವಾಗತಿಸಲಾಯಿತು.
ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಉಚ್ಚಿಲ, ಮೂಳೂರು, ಕೊಪ್ಪಲಂಗಡಿ, ಕಾಪು, ಕಟಪಾಡಿ, ಉದ್ಯಾವರದಲ್ಲಿ ಅಭಿಮಾನಿಗಳು ಹೂಗುಚ್ಛ ನೀಡಿ ಸ್ವಾಗತಿಸಿ, ಅಭಿನಂದಿಸಿದರು.
ತೆರೆದ ವಾಹನದಲ್ಲಿ ಬಂದ ಸಚಿವರಿಗೆ ಜೈಕಾರದ ನಡುವೆ, ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿ ಶುಭಹಾರೈಸಿದರು. ಬಳಿಕ ವಾಹನ ಜಾಥಾದಲ್ಲಿ ಉಡುಪಿಗೆ ತೆರಳಿದರು. ಇದೇ ವೇಳೆ ಕಾಪು ಬಿಜೆಪಿ ಕಚೇರಿಯಲ್ಲಿ ಹಾಗೂ ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ, ಕಾಪುವಿನಲ್ಲಿ ಬಿಲ್ಲವ ಸಂಘದ ವತಿಯಿಂದ ಸಚಿವರನ್ನು ಅಭಿನಂದಿಸಲಾಯಿತು.
ಪಕ್ಷ ಸಂಘಟನೆಯೊಂದಿಗೆ ಅಭಿವೃದ್ಧಿ ಕಾರ್ಯ: ಕಾಪುವಿನಲ್ಲಿ ಅಭಿನಂದನಾ ಸ್ವೀಕರಿಸಿದ ಕೋಟ ಶ್ರೀನಿವಾಸ ಪೂಜಾರಿ, `ಪಕ್ಷದ ಸಾಮಾನ್ಯ ಕಾರ್ಯಕರ್ತನಾದ ನನಗೆ ಸಚಿವ ಸ್ಥಾನ ನೀಡಿದೆ. ಪಕ್ಷ ಸಂಘಟನೆಯೊಂದಿಗೆ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ~ ಎಂದರು.
ಹೆಜಮಾಡಿ ಬಂದರು ಅಭಿವೃದ್ಧಿ ಕ್ರಮ: ಹೆಜಮಾಡಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಪೂಜಾರಿ, `ಬಂದರು ಮತ್ತು ಮುಜರಾಯಿ ಇಲಾಖೆಗೆ ಸಂಬಂಧಿಸಿದಂತೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಬಗ್ಗೆ ಚರ್ಚಿಸಿದ್ದೇನೆ. ವಿಧಾನಸಭಾ ಅಧಿವೇಶನದ ಬಳಿಕ ಬಂದರು ಮತ್ತು ಮುಜರಾಯಿ ಇಲಾಖಾ ಅಭಿವೃದ್ಧಿಗೆ ಪೂರಕ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇನೆ. ಹೆಜಮಾಡಿ ಕಿರು ಮೀನುಗಾರಿಕಾ ಬಂದರು ಂೋಜನೆಯ ತ್ವರಿತ ಅಭಿವೃದ್ಧಿಗೆ ಪೂರಕ ವಾತಾವರಣ ಕಲ್ಪಿಸುತ್ತೇನೆ~ ಎಂದು ಭರವಸೆ ನೀಡಿದರು.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ನೇತೃತ್ವದಲ್ಲಿ ಸ್ವಾಗತಿಸಲಾಯಿತು. ಜಿಲ್ಲಾಡಳಿತದಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್, ಜಿ.ಪಂ. ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಶರ್ಮ, ಎಸ್‌ಪಿ ಡಾ. ಬೋರಲಿಂಗಯ್ಯ ಹೂಗುಚ್ಚ ನೀಡಿ ಸ್ವಾಗತಿಸಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಜಿ.ಪಂ. ಉಪಕಾರ್ಯದರ್ಶಿ ಪ್ರಾಣೇಶ್ ರಾವ್, ಮುಖ್ಯ ಯೋಜನಾಧಿಕಾರಿ ವಿಜಯ ಕುಮಾರ್ ಶೆಟ್ಟಿ, ನಗರಾಭಿವೃದ್ಧಿ ಆಯುಕ್ತ ರಮಾನಂದ ನಾಯಕ್, ಪಿಡಬ್ಲುಡಿ ಇಂಜಿನಿಯರ್ ಚಂದ್ರಶೇಖರ್, ತಹಶೀಲ್ದಾರ್ ಅಭಿಜಿನ್, ಎಸಿ ಸದಾಶಿವ ಪ್ರಭು, ತಾ.ಪಂ. ಅಧ್ಯಕ್ಷ ದೇವದಾಸ ಹೆಬ್ಬಾರ್, ಜಿ.ಪಂ. ಮಾಜಿ ಅಧ್ಯಕ್ಷ ಬಿ.ಎನ್. ಶಂಕರ ಪೂಜಾರಿ, ವಾರ್ತಾಧಿಕಾರಿ ಎಂ.ಈ. ಜುಂಜಣ್ಣ, ಜಿ.ಪಂ. ಸದಸ್ಯೆ ಗೀತಾಂಜಲಿ ಸುವರ್ಣ, ಅರುಣ್ ಶೆಟ್ಟಿ ಪಾದೂರು, ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯೆ ಶೀಲಾ ಕೆ. ಶೆಟ್ಟಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.