ADVERTISEMENT

ಕ್ರೀಡಾ ಚಟುವಟಿಕೆಯಲ್ಲಿ ರಾಜಕೀಯ ಬೇಡ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2012, 9:40 IST
Last Updated 5 ಅಕ್ಟೋಬರ್ 2012, 9:40 IST
ಕ್ರೀಡಾ ಚಟುವಟಿಕೆಯಲ್ಲಿ ರಾಜಕೀಯ ಬೇಡ
ಕ್ರೀಡಾ ಚಟುವಟಿಕೆಯಲ್ಲಿ ರಾಜಕೀಯ ಬೇಡ   

ಕೊಕ್ಕರ್ಣೆ: ಪ್ರೌಢಶಾಲಾ ಕ್ರೀಡಾಕೂಟಕ್ಕೆ ಸಚಿವ ಪೂಜಾರಿ ಚಾಲನೆ
ಬ್ರಹ್ಮಾವರ:
`ಪ್ರಶಸ್ತಿಗಳು ನಮ್ಮನ್ನು ಹುಡುಕಿಕೊಂಡು ಬರಬೇಕೇ ಹೊರತು, ನಾವು ಹುಡುಕಿಕೊಂಡು ಹೋಗುವಂತಾಗಬಾರದು. ಕ್ರೀಡೆ ಆರೋಗ್ಯವಂತವಾಗಿರಬೇಕೇ ಹೊರತು ಇದರಲ್ಲಿ ರಾಜಕೀಯ ಸಲ್ಲದು~ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕೊಕ್ಕರ್ಣೆ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಗುರುವಾರ ಅವರು ಉಡುಪಿ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕೊಕ್ಕರ್ಣೆ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಉಡುಪಿ ತಾಲ್ಲೂಕು ಬ್ರಹ್ಮಾವರ ವಲಯ ಪ್ರೌಢಶಾಲೆಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಕ್ರೀಡಾಕೂಟಗಳ ಆಯೋಜನೆಯಿಂದ ಅನೇಕ ಕ್ರೀಡಾಪ್ರತಿಭೆಗಳು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಿದೆ. ಇಂತಹ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಲ್ಲಾದರೂ ಕ್ರೀಡಾ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು ಎಂದರು.

ತಾ.ಪಂ. ಅಧ್ಯಕ್ಷ ದೇವದಾಸ ಹೆಬ್ಬಾರ್ ಧ್ವಜಾರೋಹಣ ಮತ್ತು ಕ್ರೀಡಾಜ್ಯೋತಿ ಬೆಳಗಿಸಿದರು. ಐಶ್ವರ್ಯಾ ಪ್ರತಿಜ್ಞೆ ಸ್ವೀಕರಿಸಿದರು.

ಕೊಕ್ಕರ್ಣೆ ಗ್ರಾ.ಪಂ. ಅಧ್ಯಕ್ಷೆ ದೇವಕಿ ಎಸ್.ಕೋಟ್ಯಾನ್, ಉದ್ಯಮಿ ಶಿವಾನಂದ ನಾಯಕ್, ಜಿಲ್ಲಾ ಅಮೆಚೂರ್ ಅಥ್ಲೇಟಿಕ್ ಅಸೋಸಿಯೇಶನ್‌ನ ಅಧ್ಯಕ್ಷ ಕೆ.ಬಾಲಕೃಷ್ಣ ಹೆಗ್ಡೆ, ತಾ.ಪಂ. ಸದಸ್ಯೆ ಡಾ.ಸುನೀತಾ ಡಿ ಶೆಟ್ಟಿ, ಕ್ರೀಡಾಕೂಟದ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಬಿ.ಶ್ರೀನಿವಾಸ ಹೆಗ್ಡೆ, ಉಪಾಧ್ಯಕ್ಷ ಎನ್.ಗುಣವರ್ಮ ಹೆಗ್ಡೆ, ಹಿರಿಯ ಶಿಕ್ಷಕಿ ಜಯಶ್ರೀ. ಜಿ ಬಾಯರಿ, ಪ್ರಾಂಶುಪಾಲ ಶ್ರೀಧರ್ ಶೆಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಮಧುಕರ್ ಎಸ್, ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ಶೆಟ್ಟಿ, ಮೈರ್ಮಾಡಿ ಅಶೋಕ್ ಶೆಟ್ಟಿ, ಕೊಕ್ಕರ್ಣೆ ರೈತ ಸೇವಾ ಸಂಘದ ಅಧ್ಯಕ್ಷ ಶುಭಕರ್ ಶೆಟ್ಟಿ ಇದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ಶಾನುಭಾಗ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ಎಸ್‌ಶ್ರೀಧರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸತೀಶ್ಚಂದ್ರ ಚಿತ್ರಪಾಡಿ ಮತ್ತು ಶ್ರೀಕಾಂತ್ ಸಾಮಂತ್ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಕೂಟದಲ್ಲಿ ತಾಲ್ಲೂಕಿನ ಸುಮಾರು 52 ಪ್ರೌಢಶಾಲೆಗಳ 1ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.