ADVERTISEMENT

‘ಕ್ಷೇತ್ರದಲ್ಲಿ ಕಾಂಗ್ರೆಸ್‌ ಸಾಧನೆ ಶೂನ್ಯ’

​ಪ್ರಜಾವಾಣಿ ವಾರ್ತೆ
Published 7 ಮೇ 2018, 13:59 IST
Last Updated 7 ಮೇ 2018, 13:59 IST

ಶಿರ್ವ: ಬಿಜೆಪಿ ಸರ್ಕಾರದಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಾಡಿದ್ದು ಎಂದು ಕ್ಷೇತ್ರದ ಶಾಸಕರು ಬಿಂಬಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ ಸಾಧನೆ ಶೂನ್ಯ ಎಂದು ಕಾಪು ಬಿಜೆಪಿ ಪಕ್ಷದ ಅಭ್ಯರ್ಥಿ ಲಾಲಜಿ ಆರ್.ಮೆಂಡನ್ ಹೇಳಿದರು,

ಕಟಪಾಡಿಯಲ್ಲಿ ನಡೆದ ಸಾರ್ವಜನಿಕರ ಪ್ರಚಾರ ಸಭೆಯಲ್ಲಿ ಶನಿವಾರ ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಕಾಪು ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಬಲ್ಲ ಹಾಗೂ ಕ್ಷೇತ್ರದ ಜನತೆಗೆ ಪ್ರಯೋಜನ ಆಗುವ ಕಾಮಗಾರಿಗಳನ್ನು ಬಿಜೆಪಿ ಪ್ರಣಾಳಿಕೆಯಲ್ಲಿ ಅಳವಡಿಸಲಾಗಿದೆ ಎಂದರು.

ADVERTISEMENT

ಕಾಪು ಕ್ಷೇತ್ರ ಬಿಜೆಪಿ ಪ್ರಚಾರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ, ಕಾಪು ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾದ ಲಾಲಾಜಿ.ಆರ್ ಮೆಂಡನ್ ಅವರು, ಕಾಪು ಕ್ಷೇತ್ರದ ಅಭಿವೃದ್ಧಿ ಹರಿಕಾರ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರಾಜ್ಯದಲ್ಲಿಯೇ ಅತೀ ಹೆಚ್ಚು ಅನುದಾನವನ್ನು ಕಾಪು ಕ್ಷೇತ್ರದ ಜನರ ವೈದ್ಯಕೀಯ ವೆಚ್ಚಕ್ಕಾಗಿ ಮಂಜೂರಾತಿ ಮಾಡಿಸಿದ್ದಾರೆ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶಪಾಲ್ ಎ. ಸುವರ್ಣ, ಕಾಪು ಬಿಜೆಪಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಬಿಜೆಪಿ ಕ್ಷೇತ್ರ ಪರಿವಾರದ ಪ್ರಮುಖರಾದ ಪ್ರಸಾದ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಗೀತಾಂಜಲಿ ಸುವರ್ಣ, ಬಿಜೆಪಿ ಜಿಲ್ಲಾ ವಕ್ತಾರ ಕಟಪಾಡಿ ಶಂಕರ ಪೂಜಾರಿ, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗೋಪಾಲ ಕೃಷ್ಣ, ಸ್ಥಾನೀಯ ಸಮಿತಿ ಅಧ್ಯಕ್ಷ ಕಮಲಾಕ್ಷ, ಶಿಲ್ಪಾ ಜಿ ಸುವರ್ಣ, ಗಂಗಾಧರ ಸುವರ್ಣ,ವಿಜಯಕುಮಾರ ಉದ್ಯಾವರ, ವೀಣಾ ಶೆಟ್ಟಿ, ನಯನಾ ಗಣೇಶ್, ಕೇಸರಿ ಯುವರಾಜ್, ಸುಮಾ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ರಾಜೇಶ್ ಅಂಬಾಡಿ, ನಾಗೇಶ್ ಅಗ್ರಹಾರ, ಬಿಜೆಪಿ ಮುಖಂಡರಾದ ಮಾಲಿನಿ ಇನ್ನಂಜೆ. ಸುಭಾಷ್ ಬಲ್ಲಾಳ್, ಶ್ರೀಧರ್ ಪೂಜಾರಿ, ಪವಿತ್ರ ಶೆಟ್ಟಿ, ಅನಿಲ್ ಕುಮಾರ್, ಪ್ರವೀಣ್ ಪೂಜಾರಿ, ಸಚಿನ್ ಬೊಳ್ಜೆ, ಸತೀಶ್ ಪೂಜಾರಿ ಉದ್ಯಾವರ, ದಿಲೀಪ್‌ ಕಟಪಾಡಿ, ಗೋಪ ಪೂಜಾರಿ, ಗುರು ಪ್ರಸಾದ್ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.