ADVERTISEMENT

ಗ್ರಾಮೀಣ ಜನರ ಸೇವೆಗೆ ಬದ್ಧ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2012, 4:45 IST
Last Updated 20 ಅಕ್ಟೋಬರ್ 2012, 4:45 IST

ಅಂಪಾರು(ಸಿದ್ದಾಪುರ): ಅಂಪಾರು ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಸಿಂಡಿಕೇಟ್ ಬ್ಯಾಂಕ್ ಪ್ರವರ್ತಿತ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ 520ನೇ ಶಾಖೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಉದ್ಘಾಟಿಸಿದರು. 

   ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಉದ್ಘಾಟಿಸಿದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಕೇಂದ್ರ ಸರ್ಕಾರದ ನಾಮ ನಿರ್ದೇಶಿತ ನಿರ್ದೇಶಕ ನವೀನಚಂದ್ರ ಶೆಟ್ಟಿ  ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಉತ್ತಮ ಸೇವೆ ನೀಡಲು ಬ್ಯಾಂಕುಗಳ ಅವಶ್ಯತೆಯಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಅಧೀನದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಜನರಿಗೆ ಉತ್ತಮ ಸೇವೆ ನೀಡಲು ಬದ್ಧವಾಗಿದೆ ಎಂದರು.

 ಕೊಲ್ಲೂರು ಮುಕಾಂಬಿಕಾ ದೇವಳದ ಮಾಜಿ ಧರ್ಮದರ್ಶಿ ಸುಕುಮಾರ ಶೆಟ್ಟಿ ಭದ್ರತಾ ಕೊಠಡಿಯನ್ನು ಉದ್ಘಾಟಿಸಿ ಗ್ರಾಮೀಣ ಭಾಗಗಳಲ್ಲಿ ಜನರ ಅವಶ್ಯತೆಗಳಿಗೆ ಬ್ಯಾಂಕ್‌ಗಳು ಸ್ಪಂದಿ ಸಬೇಕು ಎಂದರು.

ಬ್ಯಾಂಕಿನ ಧಾರವಾಡ ಪ್ರಧಾನ ಕಚೇರಿ ಮಹಾಪ್ರಬಂಧಕ ಎಸ್.ಆರ್. ಚಂದಕ್ಕರ್ ಅಧ್ಯಕ್ಷತೆ ವಹಿಸಿದ್ದರು.
 ಬಸ್ರೂರು ಜಿ.ಪಂ.ಸದಸ್ಯ ಪ್ರಕಾಶ್ ಮೆಂಡನ್, ಕಾವ್ರಾಡಿ ತಾ.ಪಂ.ಸದಸ್ಯ ಪ್ರದೀಪ್ ಕುಮಾರ್ ಶೆಟ್ಟಿ, ಅಂಪಾರು ಗ್ರಾ.ಪಂ.ಅಧ್ಯಕ್ಷ ಕಿರಣ್ ಹೆಗ್ಡೆ, ಉದ್ಯಮಿ ಬಾಲಕೃಷ್ಣ ಭಂಡಾರಿ ವೇದಿಕೆಯಲ್ಲಿದ್ದರು.

ಬ್ಯಾಂಕಿನ ಬ್ರಹ್ಮಾವರ ಶಾಖೆ ಶಾಖಾಧಿಕಾರಿ ಭುಜಂಗ ಶೆಟ್ಟಿ ಸ್ವಾಗತಿಸಿದರು. ಪ್ರಾದೇಶಿಕ ಪ್ರಬಂಧಕ ನಾರಾಯಣ ಯಾಜಿ ಪ್ರಾಸ್ತಾವಿಕ ಮಾತನಾಡಿದರು. ಮುರಳೀಧರ ರಾವ್ ಕಾರ್ಯಕ್ರಮ ನಿರ್ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.