ADVERTISEMENT

ಜಿಲ್ಲಾ ಉಪಾಧ್ಯಕ್ಷ ಉಚ್ಛಾಟನೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2011, 8:55 IST
Last Updated 12 ಫೆಬ್ರುವರಿ 2011, 8:55 IST

ಉಡುಪಿ: ಜಿಲ್ಲಾ ಬಿಜೆಪಿಯೊಳಗಿನ ಭಿನ್ನಮತ ತಾರಕಕ್ಕೇರಿದ್ದು, ಇದೀಗ ಪಕ್ಷವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ಉಡುಪಿ ಜಿಲ್ಲಾ ಘಟಕ ಅಧ್ಯಕ್ಷ ನವೀನಚಂದ್ರ ಉಪ್ಪುಂದ ಅವರನ್ನೇ ಶುಕ್ರವಾರ ಪಕ್ಷದಿಂದ ಉಚ್ಛಾಟಿಸಲಾಗಿದೆ. ಇಬ್ಬರು ತಾಲ್ಲೂಕು ಪಂಚಾಯಿತಿ ಸದಸ್ಯರನ್ನು ಅಮಾನತುಗೊಳಿಸಲಾಗಿದೆ.

ಕುಂದಾಪುರ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿಯ ಬದಲು ವಿರೋಧ ಪಕ್ಷದ ಅಭ್ಯರ್ಥಿಗೆ ಮತ ನೀಡುವಂತೆ ಕುಮ್ಮಕ್ಕು ನೀಡುವ ಮೂಲಕ ಪಕ್ಷ ವಿರೊಧಿ ಚಟುವಟಿಕೆ ನಡೆಸಿದ ಸಲುವಾಗಿ ನವೀನಚಂದ್ರ ಉಪ್ಪುಂದ ಅವರನ್ನು ಉಚ್ಛಾಟಿಸಲಾಗಿದೆ.

ಕುಂದಾಪುರ ತಾಪಂ ಅಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಮತ ನೀಡುವಂತೆ ವಿಫ್ ನೀಡಲಾಗಿತ್ತು. ಪಕ್ಷದ ಚಿಹ್ನೆಯಲ್ಲಿ ಗೆದ್ದು ಬಂದ ತಾ.ಪಂ. ಸದಸ್ಯರಾದ ಪ್ರಸನ್ನ ಕುಮಾರ್ ಹಾಗೂ ಗೌರಿ ದೇವಾಡಿಗ ಅವರು ವಿಫ್ ಪಾಲಿಸದ ಕಾರಣ ಅವರನ್ನು ಮುಂದಿನ ಆದೇಶ ನೀಡುವವರೆಗೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ. 15 ದಿನದೊಳಗೆ ಪಕ್ಷವಿರೋಧಿ ಚಟುವಟಿಕೆ ನಡೆಸಿದ್ದಕ್ಕೆ ಕಾರಣ ನೀಡುವಂತೆ ಸೂಚಿಸಲಾಗಿದೆ. ಅವರ ಪ್ರತಿಕ್ರಿಯೆ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.