ADVERTISEMENT

`ಜೀವ ಉಳಿಸಲು ರಕ್ತದಾನ ಮಾಡಿ'

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2013, 6:17 IST
Last Updated 7 ಸೆಪ್ಟೆಂಬರ್ 2013, 6:17 IST

ಕಾರ್ಕಳ: ತುರ್ತು ಸಂದರ್ಭಗಳಲ್ಲಿ ಜೀವ ಉಳಿಸಲು ರಕ್ತದಾನ ಅವಶ್ಯ ಎಂದು  ಶಾಸಕ ವಿ.ಸುನಿಲ್ ಕುಮಾರ್ ತಿಳಿಸಿದರು.

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪಟ್ಟಣದ ಅನಂತಶಯನದ ಹೋಟೆಲ್ ಪ್ರಕಾಶದ ಸಂಭ್ರಮ ಸಭಾಂಗಣದಲ್ಲಿ ಗುರುವಾರ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ದಿನ ವೊಂದಕ್ಕೆ ಸುಮಾರು 800 ರಿಂದ 1100 ಯುನಿಟ್‌ಗಳಷ್ಟು ರಕ್ತದ ಬೇಡಿಕೆ ಇದೆ. ಆದರೆ ಶೇ 80ರಷ್ಟು ಮಾತ್ರ ರಕ್ತ ಪೂರೈಕೆಯಾಗುತ್ತಿದೆ. ತುರ್ತು ಸಂದರ್ಭಗಳಲ್ಲಿ ಇದು ಸಾಕಾಗದು. ದಾನಿಗಳು ನೀಡುವ ರಕ್ತ ಒಂದು ಅಮೂಲ್ಯ ಜೀವವನ್ನು ಉಳಿ ಸಲು ಕಾರಣವಾಗುತ್ತದೆ. ರಕ್ತದಾನ ನೀಡಲು ಮುಂದಾಗಬೇಕು  ಎಂದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬಸ್ ಏಜೆಂಟರ ಬಳಗ, ರೋಟರ‌್ಯಾಕ್ಟ್ ಕ್ಲಬ್, ಎಪಿಎಂ ಪ್ರಥಮ ದರ್ಜೆ ಕಾಲೇಜು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಅಜ್ಜರಕಾಡು ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿತ್ತು.

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಶಾಖೆಯ ಅಧ್ಯಕ್ಷ ಜೋಕಿಂ ಪಿಂಟೋ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಎಚ್.ಎಲ್. ಮುರಳೀಧರ್, ಉಡುಪಿ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಶರತ್ ಕೆ, ವೈದ್ಯಾಧಿಕಾರಿ ಡಾ.ಸಚ್ಚಿದಾನಂದ ಪ್ರಭು, ಜ್ಞಾನೇಶ್ ಕಾಮತ್, ರೋಟರ‌್ಯಾಕ್ಟ್ ಕ್ಲಬ್‌ನ ಅಧ್ಯಕ್ಷ ಗಣೇಶ್ ಸಾಲಿಯಾನ್, ಹೋಟೇಲ್ ಸ್ವಾಗತ್‌ನ ಮಾಲಿಕ ಭಾಸ್ಕರ ಶೆಟ್ಟಿ, ಪುರಸಭಾ ಮಾಜಿ ಅಧ್ಯಕ್ಷೆ ಶೋಭಾ ಆರ್. ದೇವಾಡಿಗ, ವಲಯಾಧ್ಯಕ್ಷ ವಿದ್ಯಾನಂದ ಶೆಟ್ಟಿಗಾರ್, ಉಡುಪಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರೋಟರ‌್ಯಾಕ್ಟ್  ಕ್ಲಬ್‌ನ ಅಧ್ಯಕ್ಷ ನಿತಿನ್, ಬಸ್ ಏಜೆಂಟರ ಬಳಗದ ಅಧ್ಯಕ್ಷ ಸುರೇಶ್ ದೇವಾಡಿಗ ಇದ್ದರು.
ರವಿಚಂದ್ರ ಸ್ವಾಗತಿಸಿದರು. ಇಕ್ಬಾಲ್ ಮೊಹಮದ್  ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.