ADVERTISEMENT

ಟಿಕೆಟ್‌ ಸಿಗದೇ ಇದ್ದರೇ ಪಕ್ಷೇತರವಾಗಿ ಸ್ಪರ್ಧೆ

ಬಲರಾಮನಿಗೆ ಪೂಜೆ: ಶಿರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2018, 12:17 IST
Last Updated 9 ಏಪ್ರಿಲ್ 2018, 12:17 IST

ಉಡುಪಿ: ಬಿಜೆಪಿ ಟಿಕೆಟ್ ನೀಡದೆ ಇದ್ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಶಿರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ ಹೇಳಿದರು.ಮಲ್ಪೆ ವಡಭಾಂಡೇಶ್ವರ ದೇವಳದಲ್ಲಿ ಭಾನುವಾರ ಚುನಾವಣಾ ಪ್ರಚಾರ ಆರಂಭಕ್ಕೂ ಮುನ್ನ ಬಲರಾಮನಿಗೆ ವಿಶೇಷ ಪೂಜೆ ನೆರವೇರಿಸಿ ನಂತರ ಅವರು ಪತ್ರಕರ್ತರಿಗೆ ಈ ವಿಷಯ ತಿಳಿಸಿದರು.

‘ಬಿಜೆಪಿ ಯಾವುದೇ ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ. ಹಾಗಾಗಿ ನಾನು ಉಡುಪಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆ ಇಟ್ಟುಕೊಂಡಿದ್ದೇನೆ. ಬಿಜೆಪಿಯಿಂದ ಟಿಕೆಟ್ ಸಿಗದೆ ಇದ್ದಲ್ಲಿ  ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದು ಖಚಿತ. ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ’ ಎಂದರು.

‘ಪ್ರತಿ ಬಾರಿ ಮತದಾನ ಪ್ರಮಾಣ ಇಳಿಕೆಯಾಗುತ್ತಿದೆ. ಜನರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ದೇವರಲ್ಲಿ ಪ್ರಾರ್ಥಿಸಿದ್ದೇನೆ. ಪ್ರಜಾಪ್ರಭುತ್ವದ ಯಶಸ್ಸಿಗಾಗಿ ಶೇ 95 ರಷ್ಟು ಮತದಾನ ಆಗಬೇಕು. ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಕ್ಷೇತ್ರದ ಅಭಿವೃದ್ಧಿ ಕುಂಠಿತಗೊಂಡಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಉತ್ತಮ ಅಭ್ಯರ್ಥಿಗೆ ಮತ ನೀಡಬೇಕು. ಗರಿಷ್ಠ ಮತದಾನಕ್ಕಾಗಿ ಎಲ್ಲರೂ ಪಾಲ್ಗೊಳ್ಳಬೇಕು. ಮುಂದಿನ ದಿನಗಳಲ್ಲಿ ಪ್ರಚಾರ ಕಾರ್ಯ ಆರಂಭಿಸಲಾಗುವುದು, ಈ ನಿಟ್ಟಿನಲ್ಲಿ ವೇಳಾಪಟ್ಟಿ ಎಲ್ಲವು ಸಿದ್ದವಾಗಿದೆ. ಆಯೋಗದಿಂದ ಅನುಮತಿ ಪಡೆಯುವುದು ಬಾಕಿ ಇದೆ’ ಎಂದರು.

ADVERTISEMENT

ಶ್ರೀಗಳು ಪಕ್ಷೇತರರಾಗಿ ನಿಂತರೆ ಅವರಿಗೆ ಬೆಂಬಲ ಸೂಚಿಸಿ ಜೆಡಿಯು ಸ್ಪರ್ಧೆಗೆ ಇಳಿಯುವುದಿಲ್ಲ ಎಂದು ಜೆಡಿಯು ಜಿಲ್ಲಾ ಘಟಕದ ಅಧ್ಯಕ್ಷ ರಾಜೀವ್ ಕೋಟ್ಯಾನ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.