ADVERTISEMENT

`ನಾಯಕತ್ವ ಗುಣ ಮೈಗೂಡಿಸಲು ಸಂಘಟನೆ ಅವಶ್ಯ'

​ಪ್ರಜಾವಾಣಿ ವಾರ್ತೆ
Published 2 ಜುಲೈ 2013, 5:39 IST
Last Updated 2 ಜುಲೈ 2013, 5:39 IST

ಕಾರ್ಕಳ: ವಿದ್ಯಾರ್ಥಿಗಳಲ್ಲಿ ಆರೋಗ್ಯ ಸ್ಪರ್ಧೆಯ ಜೊತೆಗೆ ಸಂವಹನ ಮತ್ತು ನಾಯಕತ್ವ ಗುಣವನ್ನು ಮೈಗೂಡಿಸಿಕೊಳ್ಳಲು ವಿದ್ಯಾರ್ಥಿ ಸಂಘ ಉತ್ತಮ ವೇದಿಕೆಯಾಗಿದೆ ಎಂದು ಬೆಂಗಳೂರಿನ ಎಂ. ಎಸ್. ರಾಮಯ್ಯ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ವೈ.ಕುಲಕರ್ಣಿ ಇಲ್ಲಿ ತಿಳಿಸಿದರು.

ತಾಲ್ಲೂಕಿನ ನಿಟ್ಟೆ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದ ಅವರು ಇಂದು ವಿಶ್ವದಾದ್ಯಂತ ಭಾರತೀಯ ವಿದ್ಯಾವಂತರು ವಿವಿಧ ಉದ್ಯಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನಮ್ಮಲ್ಲಿ ಆತ್ಮವಿಶ್ವಾಸವಿದ್ದಲ್ಲಿ ಇಂತಹ ಉದ್ಯಮದಲ್ಲಿ ಅದ್ಭುತವನ್ನು ಸೃಷ್ಟಿಸಬಹುದಾಗಿದೆ. ವಿದ್ಯಾರ್ಥಿ ಸಂಘವು ಅಂತಹ ಆತ್ಮವಿಶ್ವಾಸ ಹೊರಹೊಮ್ಮಲು ಸಹಾಯಕಾರಿಯಾಗಿದೆ ಎಂದರು.

ನಿಟ್ಟೆ ಎನ್.ಎಂ.ಎ.ಎಂ. ತಾಂತ್ರಿಕ ಕಾಲೇಜಿನ ಮಾಜಿ ಪ್ರಾಂಶುಪಾಲ ಕರ್ನಲ್ ಬಿ.ಎಸ್.ಐ.ಕೆ ಮೂರ್ತಿ, ವಿದ್ಯಾರ್ಥಿ ಸಂಘದ  ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನಿಶಾನ್ ಶೆಟ್ಟಿ ವಾರ್ಷಿಕ ಚಟುವಟಿಕೆಯ ಮುನ್ನೋಟ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ.ವೀಣಾ ಬಿ.ಕೆ ಪ್ರತಿಜ್ಞಾಜ್ಞಾವಿಧಿಯನ್ನು ಬೋಧಿಸಿದರು. ವಿದ್ಯಾರ್ಥಿ ಸಂಘದ ನಿರ್ದೇಶಕಿ ಜಯಶ್ರೀ ಶೆಟ್ಟಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.