ADVERTISEMENT

ಪರೀಕ್ಷೆ ಹತ್ತಿರ–ದೂರ ಇರಲಿ ಆತಂಕ: ರವಿಶಂಕರ್

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2014, 7:01 IST
Last Updated 1 ಮಾರ್ಚ್ 2014, 7:01 IST

ಉಡುಪಿ: ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಹಾಗೂ ಪೋಷ­ರಿಗೆ ಪಬ್ಲಿಕ್ ಪರೀಕ್ಷೆಗಳನ್ನು ಸುಲಭವಾಗಿ ಎದುರಿ­ಸುವ ಬಗ್ಗೆ ಇತ್ತೀಚೆಗೆ  ತರಬೇತಿ ಕಾರ್ಯಕ್ರಮ ನಡೆ­ಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ರವಿಶಂಕರ್ ರಾವ್ ಮಾತನಾಡಿ, ವಿದ್ಯಾರ್ಥಿಗಳು ಪಬ್ಲಿಕ್ ಪರೀಕ್ಷೆಯ ಬಗ್ಗೆ ಇರುವ ಆತಂಕವನ್ನು ದೂರ ಮಾಡಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕುದಿ ವಿಷ್ಣುಮೂರ್ತಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕೆ. ವಸಂತ ಶೆಟ್ಟಿ ಮಾತನಾಡಿ, ಮಕ್ಕಳ ಪರೀಕ್ಷಾ ಒತ್ತಡ­ವನ್ನು ಪೋಷಕರು ಅರ್ಥ ಮಾಡಿಕೊಳ್ಳಬೇಕು ಎಂದರು.

ಪ್ರೌಢಶಾಲಾ ಮುಖ್ಯಸ್ಥ ವಿಶ್ವನಾಥ ಬಾಯರಿ ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಅಂಜಲಿ ಭಟ್, ನಾಗೇಶ್ ಪೂಜಾರಿ, ಸುಕನ್ಯಾ ಮಧ್ಯಸ್ಥ ಉಪಸ್ಥಿತರಿದ್ದರು. ಸಹಶಿಕ್ಷಕಿ ನಾಗರತ್ನ ಜಿ ಭಾಗ್ವತ್ ಸ್ವಾಗತಿಸಿದರು, ಬಾಷಾ ಶಿಕ್ಷಕ ರಾಮಕೃಷ್ಣ ನಾಯಕ್ ವಂದಿಸಿದರು, ಸಹಶಿಕ್ಷಕಿ ಮನೋರಮಾ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.