ADVERTISEMENT

ಪ್ರೀತಿ, ವಿಶ್ವಾಸದಿಂದ ಮಾತ್ರ ಗೆಲುವು ಸಾಧ್ಯ: ಮೊಯಿಲಿ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2017, 11:49 IST
Last Updated 12 ಅಕ್ಟೋಬರ್ 2017, 11:49 IST
ಪ್ರೀತಿ, ವಿಶ್ವಾಸದಿಂದ ಮಾತ್ರ ಗೆಲುವು ಸಾಧ್ಯ: ಮೊಯಿಲಿ
ಪ್ರೀತಿ, ವಿಶ್ವಾಸದಿಂದ ಮಾತ್ರ ಗೆಲುವು ಸಾಧ್ಯ: ಮೊಯಿಲಿ   

ಕಾರ್ಕಳ: ಜನರ ಪ್ರೀತಿ ವಿಶ್ವಾಸ ಗಳಿಸಿದ್ದಲ್ಲಿ ಮಾತ್ರ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯ ಎಂದು ಸಂಸದ ಡಾ.ಎಂ.ವೀರಪ್ಪ ಮೊಯಿಲಿ ತಿಳಿಸಿದರು.

ನಗರದಲ್ಲಿ ಮಂಗಳವಾರ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಾರಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾಗಿದೆ. ನೋಟ್ ಬ್ಯಾನ್‌ನಿಂದಾಗಿ ಆರ್ಥಿಕ ಪ್ರಗತಿ ಕುಸಿದಿದೆ. ರಾಜಧರ್ಮ ವಿರೋಧಿ ಕೆಲಸವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ಈ ಬಾರಿ ಕಾರ್ಕಳದಲ್ಲಿ ಅಭ್ಯರ್ಥಿ ಎಚ್.ಗೋಪಾಲ ಭಂಡಾರಿ ಅವರ ಅವರ ನೇತೃತ್ವದಲ್ಲೇ ಚುನಾವಣೆ ನಡೆಯಲಿದ್ದು, 155 ಸ್ಥಾನಗಳಲ್ಲಿ ಕಾರ್ಕಳ ಕ್ಷೇತ್ರದ ಗೆಲುವೂ ಸೇರಬೇಕಾಗಿದೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ‘ಚುನಾವಣೆ ಪೂರ್ವದಲ್ಲಿ ಪ್ರಣಾಳಿಕೆಯ 165 ಭರವಸೆಗಳಲ್ಲಿ 155ನ್ನು ಪೂರೈಸಿ, ನುಡಿದಂತೆ ನಡೆದ ಸರ್ಕಾರ ನಮ್ಮದು. ರಾಜ್ಯದಲ್ಲಿರುವ ಬಿಜೆಪಿ ನಾಯಕರು ದಿನಕ್ಕೊಂದು ಹಗರಣ ಬಯಲು ಮಾಡುತ್ತೇವೆ ಎಂದು ಜನತೆ ದಿಕ್ಕು ತಪ್ಪಿಸುತ್ತಿದ್ದಾರೆ. ಯಡಿಯೂರಪ್ಪ ಅಧಿಕಾರಕ್ಕಾಗಿ ಹರಸಾಹಸ ಪಡುತ್ತಾ ಸ್ಥಿಮಿತ ಕಳೆದುಕೊಂಡಿದ್ದಾರೆ’ ಎಂದರು.

ADVERTISEMENT

ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ಮಾತನಾಡಿ, ‘ದೇಶಕ್ಕಾಗಿ ರಕ್ತವನ್ನು ಅರ್ಪಿಸಿದ ಪಕ್ಷ ಅಂದ್ರೆ ಕಾಂಗ್ರೆಸ್. ರಾಜ್ಯದ ಯೋಜನೆಗಳನ್ನು ಬಿಜೆಪಿ ಸರ್ಕಾರದ ಯೋಜನೆ ಎಂದು ಹೇಳಿ ಜನರಿಗೆ ದಿಕ್ಕು ತಪ್ಪಿಸುವ ಕೆಲಸಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಕಾಂಗ್ರಸ್ ಸಾಧನೆಗಳನ್ನು ಜನರಿಗೆ ತಲುಪಿಸಲಿದ್ದೇವೆ’ ಎಂದರು.

ಸಚಿವ ಯು.ಟಿ.ಖಾದರ್, ಸಚಿವ ಪ್ರಮೋದ್ ಮಧ್ವರಾಜ್, ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್, ಸಚಿವ ರಮಾನಾಥ ರೈ, ಎಚ್.ಗೋಪಾಲ ಭಂಡಾರಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧಾಕರ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ, ಜಿಲ್ಲಾಧ್ಯಕ್ಷ ಗೋಪಾಲ ಪೂಜಾರಿ, ಯುವ ನಾಯಕ ಹರ್ಷ ಮೊಯಿಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಭಾವ, ಕಾರ್ಯದರ್ಶಿ ಎಂ.ಎಸ್.ಮೊಹಮ್ಮದ್, ವೆರೋನಿಕಾ ಕರ್ನೆಲಿಯೋ, ನವೀನ್ ಡಿಸೋಜಾ, ಮೊಹಮ್ಮದ್ ಮಸೂದ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಡಾ.ಸಂತೋಷ್ ಕುಮಾರ್ ಶೆಟ್ಟಿ, ವಿಶ್ವಾಸ್ ಅಮೀನ್, ಯುವಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಶ್ಯಾಮ ಶೆಟ್ಟಿ ಉಪಸ್ಥಿತರಿದ್ದರು. ಬಿಪಿನ್‌ಚಂದ್ರಪಾಲ್ ನಕ್ರೆ ಸ್ವಾಗತಿಸಿದರು. ಶೇಖರ ಮಡಿವಾಳ ಮತ್ತು ರವಿಶಂಕರ್ ಶೇರಿಗಾರ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.