ADVERTISEMENT

ಫಲಾನುಭವಿಗಳಿಗೆ ಮನೆ ಹಸ್ತಾಂತರ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2012, 4:50 IST
Last Updated 20 ಅಕ್ಟೋಬರ್ 2012, 4:50 IST

ಹೆಬ್ರಿ: ಪೆರ್ಡೂರು ಸಮೀಪದ 23ನೇ ಬೈರಂಪಳ್ಳಿ ಗ್ರಾಮ ಪಂಚಾಯಿತಿಯ ಪ್ರಸಕ್ತ ಸಾಲಿನಲ್ಲಿ ನಾನಾ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಕಾರ್ಯಕ್ರಮ ಶುಕ್ರವಾರ ಗ್ರಾಮ ಪಂಚಾಯಿತಿ ವಠಾರದಲ್ಲಿ ನಡೆಯಿತು.

ಪಂಚಾಯಿತಿ ಅಧ್ಯಕ್ಷ ಜಿಯಾನಂದ ಹೆಗ್ಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಸದಸ್ಯ ರಾಮ ಕುಲಾಲ್ 1.85 ಲಕ್ಷ ಮೌಲ್ಯದ ಸಹಾಯ ಧನವನ್ನು ವಿದ್ಯಾರ್ಥಿಗಳಿಗೆ ಮತ್ತು ಫಲಾನುಭವಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಫಲಾನುಭವಿಗಳು ಸವಲತ್ತುಗಳ ಪ್ರಯೋಜನ ಪಡೆದುಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವಂತೆ ಕರೆ ನೀಡಿದರು.

ಮನೆ ಹಸ್ತಾಂತರ: ಐಟಿಡಿಪಿ ಇಲಾಖೆ ವತಿಯಿಂದ ಬೈರಂಪಳ್ಳಿ ಪಂಚಾಯಿತಿ ವ್ಯಾಪ್ತಿಯ ಮೂರು ಕೊರಗ ಜನಾಂಗದ ಕುಟುಂಬಗಳಿಗೆ ಪಂಚಾಯಿತಿ ವತಿಯಿಂದ ಈ ಸಂದರ್ಭದಲ್ಲಿ ಮನೆಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಸಾಲ್‌ಮೆಟ್ರಿ , ಕೊರಗ ಒಕ್ಕೂಟದ ಮಾಜಿ ಅಧ್ಯಕ್ಷ ಬೊಗ್ರ , ಮಾಜಿ ಅಧ್ಯಕ್ಷೆ ಗೌರಿ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಕಾರ್ಕಳ ಕೊರಗ ಸಮಾಜದ ಮುಖಂಡ ರಮೇಶ್, ಚೀಂಕ್ರ ಕೊರಗ, ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ಪಿಡಿಓ ಸಿದ್ದೇಶ್ ಎಸ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.