ADVERTISEMENT

ಮತದಾನ: ವಿದ್ಯಾರ್ಥಿಗಳ ಪ್ರತಿಜ್ಞಾವಿಧಿ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2014, 10:35 IST
Last Updated 18 ಮಾರ್ಚ್ 2014, 10:35 IST
ಸ್ವೀಪ್ ಸಮಿತಿ ಉಡುಪಿಯ ಒಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು.
ಸ್ವೀಪ್ ಸಮಿತಿ ಉಡುಪಿಯ ಒಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು.   

ಉಡುಪಿ: ‘ಮತದಾನದ ಹಕ್ಕನ್ನು ಕರ್ತವ್ಯ ಎಂದು ಪರಿಗಣಿಸಿ ಪ್ರಜೆಗಳು ಮತ ಚಲಾಯಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ ಹೇಳಿದರು.

ಸ್ವೀಪ್ ಸಮಿತಿ ಉಡುಪಿಯ ಒಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿಯನ್ನು ತಮ್ಮ ಪೋಷಕರಿಗೆ ವಿವರಿಸಿ ಮತದಾನ ಮಾಡಲು ಪ್ರೇರೇಪಿಸಬೇಕು. ಏಪ್ರಿಲ್ ೧೭ ರಂದು ನಡೆಯುವ ಚುನಾವಣೆಯಲ್ಲಿ ಬೆಳಿಗ್ಗೆ ೭ ರಿಂದ ಸಂಜೆ ೬ ರ ವರೆಗೆ ಮತದಾನ ಮಾಡಲು ಅವಕಾಶವಿದ್ದು,  ಜಿಲ್ಲಾಡಳಿತವು ಮತದಾನದ ಕುರಿತು ವಿವಿಧ ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸುತ್ತಿದೆ. ನಾಗರಿಕರು ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ಮತದಾನ ಮಾಡಬೇಕು ಎಂದು ಅವರು ಹೇಳಿದರು. 

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್‌.ನಾಗೇಂದ್ರ ಮಧ್ಯಸ್ಥ, ಒಳಕಾಡು ಶಾಲೆಯ ಮುಖ್ಯೋಪಧ್ಯಾಯಿನಿ ಬಿ. ನಿರ್ಮಲಾ ಮತ್ತಿತರರು ಉಪಸ್ಥಿ­ತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.