ADVERTISEMENT

ಮಿನಿ ವಿಧಾನಸೌಧಕ್ಕೆ ಮುತ್ತಿಗೆ: ಬಂಧನ

94ಸಿ ಹಕ್ಕು ಪತ್ರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2017, 6:02 IST
Last Updated 21 ಜನವರಿ 2017, 6:02 IST
ಮಿನಿ ವಿಧಾನಸೌಧಕ್ಕೆ ಮುತ್ತಿಗೆ: ಬಂಧನ
ಮಿನಿ ವಿಧಾನಸೌಧಕ್ಕೆ ಮುತ್ತಿಗೆ: ಬಂಧನ   

ಕುಂದಾಪುರ:  94ಸಿ ಅರ್ಜಿ ಅಡಿಯಲ್ಲಿ ಮನೆ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಹಕ್ಕು ಪತ್ರಕ್ಕಾಗಿ ಕಾಯುತ್ತಿರುವ ಫಲಾನುಭವಿ ಗಳಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಶುಕ್ರವಾರ ಕುಂದಾಪುರದ ಮಿನಿ ವಿಧಾ ನಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿ ವಾಸ ಪೂಜಾರಿ ಹಾಗೂ ಇನ್ನಿತರ ಪ್ರತಿಭ ಟನಾಕಾರರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು. 

ಕಾಲ್ನಡಿಗೆಯಲ್ಲಿ ಮಿನಿ ವಿಧಾನ ಸೌಧಕ್ಕೆ ತೆರಳುವ ಮೊದಲು ಶಾಸ್ತ್ರಿ ಸರ್ಕಲ್‌ ಬಳಿಯಲ್ಲಿ ನಡೆದ ಸಾರ್ವಜನಿಕ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಹಲವು ತಿಂಗಳಿನಿಂದ 94ಸಿ ಅರ್ಜಿ ವಿಲೇವಾರಿಯ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಬೇಕು ಎನ್ನುವ ನೆಲೆ ಯಲ್ಲಿ ಹೋರಾಟ ನಡೆಸುತ್ತಿದ್ದರೂ, ಅರ್ಜಿ ವಿಲೇವಾರಿಗೆ ಕ್ರಮ ಕೈಗೊಳ್ಳಬೇ ಕಾದ ಇಲಾಖೆ ನಿರ್ಲಕ್ಷ್ಯ ಧೋರಣೆ ಅನು ಸರಿಸುತ್ತಿದೆ ಎಂದು ಆರೋಪಿಸಿದರು.

ಉಡುಪಿ ಜಿಲ್ಲೆಯಲ್ಲಿ ಇರುವ ಸಾವಿ ರಾರು ನಿವೇಶನರಹಿತ ಬಡವರಿಗೆ ನಿವೇ ಶನ ನೀಡಬೇಕು ಎನ್ನುವ ಇಚ್ಛಾಶಕ್ತಿ ಯನ್ನು ಸರ್ಕಾರದ ಪ್ರಮುಖರು ತೋರಿ ದರೂ, ಸಂಬಂಧಿಸಿದ ಇಲಾಖೆ ಸರ್ಕಾ ರದ ಉದ್ದೇಶಗಳನ್ನೆ ಗಾಳಿಗೆ ತೂರಿ ಬಡ ವರನ್ನು ವಂಚಿಸುತ್ತಿದೆ. ವಿಧಾನ ಪರಿ ಷತ್‌ನಲ್ಲಿ ಹಾಗೂ ಕಂದಾಯ ಸಚಿವರಲ್ಲಿ ಖುದ್ದು ಈ ವಿಷಯದ ಕುರಿತು ಚರ್ಚಿಸಿ ಸಮಸ್ಯೆಯ ಪರಿಹಾರಕ್ಕಾಗಿ ಒತ್ತಾಯಿಸಿ ದರೂ ಈವರೆಗೆ ಯಾವುದೇ ರೀತಿಯ ಪ್ರಯೋಜನ ಆಗಿಲ್ಲ.

ಜಿಲ್ಲೆಯ ಶಾಸಕರೊ ಬ್ಬರು ಧರಣಿ ಕುಳಿತು ಅಧಿಕಾರಿಗಳನ್ನು ಹಾಗೂ ಸರ್ಕಾರವನ್ನು ಎಚ್ಚರಿಸುವ ಪ್ರಯತ್ನ ಮಾಡಿದರೂ, ಅದೂ ಅರಣ್ಯ ರೋಧನವಾಗಿಯೇ ಉಳಿದುಕೊಂಡಿದೆ. ಜಿಲ್ಲೆಯ ಕಂದಾಯ ಇಲಾಖೆಯ ಅಧಿಕಾ ರಿಗಳು ಏನು ಮಾಡುತ್ತಿದ್ದಾರೆ ಎಂದು ಖಾರವಾಗಿ ಪ್ರಶ್ನಿಸಿದ ಅವರು, ಬಡವರಿಗೆ ಹಕ್ಕು ಪತ್ರ ದೊರಕುವವರೆಗೂ ಯಾವು ದೇ ಕಾರಣಕ್ಕೂ ಹೋರಾಟದಿಂದ ಹಿಂ ದಕ್ಕೆ ಸರಿಯುವುದಿಲ್ಲ ಎಂದು ನುಡಿದರು. 

ಬಂಧನ: ಶಾಸ್ತ್ರಿ ಸರ್ಕಲ್‌ನಲ್ಲಿ ಪ್ರತಿಭ ಟನಾ ಸಭೆ ಮುಗಿಸಿ ಕಾಲ್ನಡಿಗೆಯಲ್ಲಿ ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಪ್ರತಿಭಟನಾಕಾರರನ್ನು ಸಂಚಾರ ಪೊಲೀಸ್‌ ಠಾಣೆಯ ಬಳಿಯಲ್ಲಿ ತಡೆದ ಪೊಲೀಸರು ಬಂಧಿಸಿ, ಎಲ್‌ಐಸಿ ಕಚೇರಿಯ ಬಳಿ ಬಿಡುಗಡೆಗೊಳಿಸಿದರು. ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕುವ ಪ್ರತಿಭಟನಾಕಾರರ ತೀರ್ಮಾನದ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದು ಕೊಂಡಿದ್ದ ಪೊಲೀಸ್ ಇಲಾಖೆ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿತ್ತು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಯಡ್ತರೆ ಶಂಕರ ಪೂಜಾರಿ, ಬಾಬಾ ಶೆಟ್ಟಿ ತಗ್ಗರ್ಸೆ, ಶ್ರೀಲತಾ ಶೆಟ್ಟಿ, ಲಕ್ಷ್ಮೀ ಮಂಜು ಬಿಲ್ಲವ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ಮೊಗವೀರ, ಕುಂದಾಪುರ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಬೈಂದೂರು ಕ್ಷೇತ್ರ ಸಮಿತಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ರಾಜೇಶ್ ಕಾವೇರಿ, ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಠದ ಮಾಜಿ ಸಂಚಾಲಕ ಕಿಶೋರಕುಮಾರ ಬಿ. ಪ್ರತಿಭಟನೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT