ADVERTISEMENT

ಮೂಡುಬೆಳ್ಳೆ: ಪ್ರತಿಭಾ ಕಾರಂಜಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2013, 9:27 IST
Last Updated 20 ಡಿಸೆಂಬರ್ 2013, 9:27 IST

ಶಿರ್ವ: ಮಕ್ಕಳ ಪ್ರತಿಭೆಯನ್ನು ಬೆಳಗಿ­ಸಲು ಇಂತಹ   ಕಾರ್ಯಕ್ರಮಗಳು ಅತ್ಯಗತ್ಯ. ಶಾಲಾ ಮಟ್ಟದಲ್ಲಿ ಪ್ರತಿಭೆ­ಗಳನ್ನು ಗುರುತಿಸಿ, ಪ್ರೋತ್ಸಾಹಿಸಲು ಸಹಕಾರಿಯಾಗಿದೆ. ಭಾರತವು ಸುಂದರ ಹೂ ತೋಟದಂತೆ ವಿಭಿನ್ನ ಸಂಕೃತಿ ಹಾಗೂ ಸಂಪ್ರಾದಯಗಳನ್ನು ಹೊಂದಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ತಿಳಿಸಿದರು.

ಮೂಡುಬೆಳ್ಳೆಯಲ್ಲಿ ಇತ್ತೀಚೆಗೆ ನಡೆದ ಉಡುಪಿ ವಲಯ ಮಟ್ಟದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ  ಅವರು ಮಾತನಾಡಿದರು.
ಸಂತ ಲಾರೆನ್ಸ್ ವಿದ್ಯಾ ಸಂಸ್ಥೆಯ ಸಂಚಾಲಕ ಜೋಸ್ವಿ ಫರ್ನಾಂಡಿಸ್‌ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಉಪೇಂದ್ರ ನಾಯಕ್, ಉಡುಪಿ ಶಾಸಕ ಪ್ರಮೋದ್ ಮದ್ವರಾಜ್, ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಗಣಪತಿ ಶ್ರೀಯಾನ್, ಉಡುಪಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಗೌರಿ  ಪೂಜಾರ್ತಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಐಡಾ ಗಿಬ್ಬ ಡಿಸೋಜ, ಮೂಡುಬೆಳ್ಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಂದ್ರ ಶೆಟ್ಟಿ, ದೇವದಾಸ್ ಹೆಬ್ಬಾರ್, ಎ.ಕೆ.ಆಳ್ವ, ಶಿಕ್ಷಣಾಧಿಕಾರಿ ವಸಂತ ಶೆಟ್ಟಿ , ಮಾಯಾ ಎಸ್., ಪಾವ್ಲ್ ಸಿಕ್ವೇರಾ, ಸರಿತಾ ಡಿ’ಸೋಜ, ಹಿಲ್ಡಾ ಅರಾನ್ನ, ರೆ. ಫಾ. ಪಿ. ರಾಜ್  ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಉಡುಪಿ ವಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿ ವಲಯ ಹಾಗೂ ಸಂತ ಲಾರೆನ್ಸ್ ಸಮೂಹ ಶಿಕ್ಷಣ ಸಂಸ್ಥೆಗಳು ಮೂಡುಬೆಳ್ಳೆ ಇವರ ಸಂಯುಕ್ತ ಆಶ್ರಯದಲ್ಲಿಉಡುಪಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಬೆಳ್ಳೆ ಚಚರ್ ಅನುದಾನಿತ ಹಿ.ಪ್ರಾ.ಶಾಲೆ ಇವರ ಪ್ರಾಯೋಜಕತ್ವ­ದಲ್ಲಿ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಯಕ್ರಮವು ನಡೆಯಿತು.  ಕ್ಷೇತ್ರ ಶಿಕ್ಷಣಾಧಿಕಾರಿ ರವಿಶಂಕರ್ ರಾವ್, ಸ್ವಾಗತಿಸಿದರು. ಸಿಲ್ವೆಸ್ಟರ್ ಮತಾಯಸ್ ವಂದಿಸಿದರು. ಮಾಲತಿ ಎ., ಮರಿಯ ಬರ್ಬೋಜಾ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.