ADVERTISEMENT

ಯುವ ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2012, 9:50 IST
Last Updated 17 ಆಗಸ್ಟ್ 2012, 9:50 IST

ಉಡುಪಿ: `ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಕ್ರಮ ಕೈಗೊಂಡಿದ್ದರೂ ವಿರೋಧ ಪಕ್ಷಗಳು ನಡೆಸುತ್ತಿರುವ ಹೋರಾಟ ದೇಶದ ಸಮಗ್ರತೆಗೆ ಕೊಡಲಿ ಏಟಾಗಿದೆ~ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯದರ್ಶಿ ಎಂ.ಎ.ಗಫೂರ್ ಹೇಳಿದರು.

ಉಡುಪಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಉಡುಪಿಯಲ್ಲಿ ಬುಧವಾರ ಏರ್ಪಡಿಸಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭ್ರಷ್ಟಾಚಾರದ ವಿರುದ್ಧ ನಡೆಯುವ ಹೋರಾಟದ ಬಗ್ಗೆ ನಮಗೆ ಗೌರವವಿದೆ. ಆದರೆ ಹೋರಾಟದ ಮಾರ್ಗ ಸರಿಯಿಲ್ಲ. ಈ ರೀತಿಯ ಹೋರಾಟದಿಂದ ದೇಶವನ್ನು ಒಡೆಯುವಂತಹ ಕೆಲಸ ಆಗುತ್ತಿರುವುದು ಬೇಸರದ ಸಂಗತಿ. ಲೋಕಪಾಲ್ ಮಸೂದೆ ಜಾರಿಗೆ ತಂದರೂ ಜನ ಜಾಗೃತರಾಗಿರಬೇಕು, ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ದೇಶದ ಪ್ರಜಾಪ್ರಭುತ್ವವನ್ನು ತಿಳಿದುಕೊಂಡು ಜನಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಿಖಿಲ್ ಉಮೇಶ್ ಗೌಡ   ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಸಮಾಜ ಸೇವಕರಾದ ವಿಶ್ವನಾಥ ಶೆಣೈ ಮಲ್ಪೆ, ಶ್ರೀಧರ್ ಕೋಟ್ಯಾನ್ ಹಾಗೂ ರಮೇಶ್ ಇಂದ್ರಾಳಿ ಅವರನ್ನು ಸನ್ಮಾನಿಸಲಾಯಿತು.

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ ಅಧ್ಯಕ್ಷತೆ ವಹಿಸ್ದ್ದಿದರು. ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಇಂಟಕ್ ಜಿಲ್ಲಾ ಸಮಿತಿ ಅಧ್ಯಕ್ಷ ಮುರಳಿ ಎ. ಶೆಟ್ಟಿ, ಜಿಲ್ಲಾ ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ಕೇಶವ ಎಂ. ಕೋಟ್ಯಾನ್, ಯುವಕಾಂಗ್ರೆಸ್ ಸಮಿತಿ  ಅಧ್ಯಕ್ಷ ಯತೀಶ್ ಕರ್ಕೇರ, ಜಿಲ್ಲಾ ಕಾಂಗ್ರೆಸ್ ಎಸ್.ಸಿ., ಎಸ್.ಎಸ್‌ಟಿ. ಘಟಕದ ಅಧ್ಯಕ್ಷ ಎಸ್. ನಾರಾಯಣ್, ಕೆ.ಪಿ.ಸಿ.ಸಿ ಸದಸ್ಯರಾದ ಭುಜಂಗ ಶೆಟ್ಟಿ, ದಿನೇಶ್ ಪುತ್ರನ್, ಜಯಶ್ರೀ ಕಷ್ಣರಾಜ್, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ನರಸಿಂಹ ಮೂರ್ತಿ, ಜನಾರ್ದನ್ ತೋನ್ಸೆ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ.ಕೃಷ್ಣಮರ್ತಿ ಆಚಾರ್ಯ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಮೃತ್ ಶೆಣೈ, ನವೀನ್ ಶೆಟ್ಟಿ ಪಡುಬಿದ್ರಿ, ಹಬೀಬ್ ಅಲಿ, ಮಿಥುನ್ ಅಮೀನ್ ಇತರರು ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.