ಕಾರ್ಕಳ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಭ್ರಷ್ಟಾ ಚಾರದ ಕೂಪವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು.
ನಗರದ ಮಂಜುನಾಥ ಪೈ ಬಯಲು ರಂಗಮಂಟಪದಲ್ಲಿ ಬಿಜೆಪಿ ವತಿಯಿಂದ ಗುರುವಾರ ಆಯೋಜಿಸಿದ ಸಂಕಲ್ಪ ಸಮಾವೇಶವನ್ನು ಉದ್ಘಾಟಿಸಿ ಮಾತ ನಾಡಿದರು.
ಸರ್ಕಾರದ ವಿವಿಧ ಯೋಜನೆಗಳು ಜನಸಾಮಾನ್ಯರ ಬದು ಕಿಗೆ ಕಂಟಕವಾಗಿ ಮಾರ್ಪಡಿಸಿದ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಸಲ್ಲುತ್ತದೆ. ಮದ್ಯಮುಕ್ತ ದಿಂದ ಸ್ವರಾಜ್ಯವನ್ನು ಕಂಡ ಗಾಂಧೀಜಿ ಕಂಡ ಕನಸನ್ನು ಭಗ್ನಗೊಳಿಸಲು ಹೊರಟಿರುವ ಸಿದ್ದರಾಮಯ್ಯ, ಅಗ್ಗದ ಬೆಲೆಯಲ್ಲಿ ಮದ್ಯ ಮಾರಾಟಕ್ಕೆ ಯೋಜನೆ ಹಾಕಿಕೊಂಡಿದ್ದಾರೆ. ಇದು ಜನಸಾ ಮಾನ್ಯರ ಬದುಕಿಗೆ ಹಾಕಿದ ಸವಾಲಾಗಿದೆ.
ರಾಜ್ಯದಲ್ಲಿ ಬಿಜೆಪಿಯೇತರ ಸರ್ಕಾರ ಅಧಿಕಾರದಲ್ಲಿದ್ದರೂ ಶಾಸಕ ವಿ.ಸುನೀಲ್ ಕುಮಾರ್ ಅವರ ಸತತ ಪರಿಶ್ರಮದಿಂದ ಕ್ಷೇತ್ರವು ಅಭಿವೃದ್ಧಿ ಕಂಡಿದೆ. ಅದನ್ನು ಎದುರಿಟ್ಟುಕೊಂಡು ಮುಂದಿನ ಹೋರಾಟಕ್ಕೆ ಬಿಜೆಪಿ ಮುಂದಾಗಲಿದೆ ಎಂದರು.
ವಿಧಾನ ಪರಿಷತ್ ಮುಖ್ಯ ಸಚೇತಕ ಗಣೇಶ್ ಕಾರ್ಣಿಕ್ ಮಾತನಾಡಿ, ಜನಸಾಮಾನ್ಯರ ಹಾಗೂ ರೈತರ ಆಶೋತ್ತರಗಳನ್ನು ಈಡೇರಿಸುವ ಸಲುವಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಕೀರ್ತಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಲ್ಲುತ್ತದೆ. ತನ್ಮೂಲಕ ನಗರ ಹಾಗೂ ಗ್ರಾಮೀಣ ರಸ್ತೆ ಅಭಿವೃದ್ಧಿ, ರೈಲು ಮತ್ತು ಸೇತುವೆ ಮತ್ತಿತರ ಸವಲತ್ತುಗಳನ್ನು ಜನಸಾಮಾನ್ಯರು ಕಾಣುವಂತಾಗಿದೆ.
ಇಡೀ ರಾಜ್ಯದಲ್ಲಿ ಕಾರ್ಕಳ ತಾಲ್ಲೂಕು ವ್ಯಾಪ್ತಿಯ 20 ತಾಲ್ಲೂಕು ಪಂಚಾಯಿತಿ ಹಾಗೂ 5 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಸಾಧಿಸುವ ಮೂಲಕ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುವ ಹೊಣೆಗಾರಿಕೆ ಇದೆ ಎಂದರು.
ಶಾಸಕ ವಿ.ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಶ್ಯಾಮಲಾ ಕುಂದರ್, ಮೋನಪ್ಪ ಭಂಡಾರಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸವಿತಾ ಕೋಟ್ಯಾನ್, ತಾಲ್ಲೂಕು ಪಂಚಾ ಯಿತಿ ಅಧ್ಯಕ್ಷೆ ವಿಜಯಾ ಕುಮಾರಿ, ಮಟ್ಲುಪಾಡಿ ಸತೀಶ್, ವಕೀಲ ಎಂ.ಕೆ ವಿಜಯ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯ ಉದಯ ಎಸ್.ಕೋಟ್ಯಾನ್, ಅಂತೋನಿ ಡಿಸೋಜಾ ನಕ್ರೆ, ಶ್ರೀನಿವಾಸ ಕಾರ್ಲ, ಬೋಳ ಸದಾಶಿವ ಶೆಟ್ಟಿ, ಸೋಜನ್, ರವೀಂದ್ರ ಕುಮಾರ್ ಕುಕ್ಕುಂದೂರು ಇದ್ದರು.
ಕ್ಷೇತ್ರಾಧ್ಯಕ್ಷ ಮಣಿರಾಜ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವ ಮೋರ್ಚಾದ ಜಿಲ್ಲಾಧ್ಯಕ್ಷ ನವೀನ ನಾಯಕ್ ಅತ್ತೂರು ಸ್ವಾಗತಿಸಿದರು. ವಕ್ತಾರ ಸಾಣೂರು ನರಸಿಂಹ ಕಾಮತ್ ನಿರೂಪಿಸಿದರು. ಆರೀಫ್ ಕಲ್ಲೊಟ್ಟೆ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.