ADVERTISEMENT

ಸರ್ಕಾರಿ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ

​ಪ್ರಜಾವಾಣಿ ವಾರ್ತೆ
Published 21 ಜನವರಿ 2012, 7:30 IST
Last Updated 21 ಜನವರಿ 2012, 7:30 IST

ಬ್ರಹ್ಮಾವರ: `ಸತ್ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಹಿರಿದು. ಇಂದು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿರುವುದರಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ~ ಎಂದು ಶಾಸಕ ಕೆ.ರಘುಪತಿ ಭಟ್ ಹೇಳಿದರು.

ಕೊಕ್ಕರ್ಣೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣದಿಂದ ವಂಚಿತರಾಗುತ್ತಿರುವ ಅದೆಷ್ಟೋ ಬಡ ವಿದ್ಯಾರ್ಥಿಗಳಿಗೆ ಸರ್ಕಾರಿ ಕಾಲೇಜುಗಳು ಗುಣಮಟ್ಟದ ಶಿಕ್ಷಣ ನೀಡುತ್ತಿವೆ. ವಿದ್ಯಾರ್ಥಿಗಳು ಇದನ್ನು ಮನಗಂಡು ಕಲಿಕೆಯಲ್ಲಿ ಶ್ರದ್ಧೆಯಿಂದ ತೊಡಗಿಸಿಕೊಳ್ಳಬೇಕು~ ಎಂದು ಅವರು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಕೇಶವಮೂರ್ತಿ ದಂಪತಿ ಮತ್ತು ಕಟ್ಟಡದ ಗುತ್ತಿಗೆದಾರ ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ ಅವರನ್ನು ಸನ್ಮಾನಿಸಲಾಯಿತು.

ಕೊಕ್ಕರ್ಣೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇವಕಿ ಎಸ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಸದಸ್ಯೆ ಗೋಪಿ ಕೆ ನಾಯ್ಕ, ತಾ.ಪಂ. ಉಪಾಧ್ಯಕ್ಷೆ ಬೇಬಿ ಎಸ್.ಪೂಜಾರಿ, ತಾ.ಪಂ.ಸದಸ್ಯೆ ಸುನೀತಾ ಡಿ ಶೆಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಶಿಂಧಾ, ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಬಿ.ಶ್ರೀನಿವಾಸ ಹೆಗ್ಡೆ, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎನ್.ಗುಣವರ್ಮ ರಾಜ್, ಶಿಕ್ಷಕಿ ಜಯಶ್ರೀ, ಕೊಕ್ಕರ್ಣೆ ಗ್ರಾಮ ಪಂಚಯಿತಿ ಉಪಾಧ್ಯಕ್ಷೆ ಅಂಬಾ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ಶ್ರೀಧರ್ ಶೆಟ್ಟಿ, ಉಪನ್ಯಾಸಕರಾದ ರಾಘವೇಂದ್ರ ಅಡಿಗ, ಪ್ರಕಾಶ್, ಶ್ರೀಧರ್ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.