ಬ್ರಹ್ಮಾವರ: ಗ್ರಾಮೀಣ ಭಾಗದ ಸಂಘ ಸಂಸ್ಥೆಗಳು ಮಾಡುವ ಒಳ್ಳೆಯ ಕೆಲಸಗಳಿಗೆ ಯಾವಾಗಲೂ ಪ್ರೋತ್ಸಾಹ ನೀಡುವ ಕರ್ತವ್ಯ ನಮ್ಮದಾಗಲಿ ಎಂದು ಸಾಲಿಗ್ರಾಮ ಗುರುನರಸಿಂಹ ದೇವ ಸ್ಥಾನದ ಆಡಳಿತ ಧರ್ಮದರ್ಶಿ ಎ.ಜಗ ದೀಶ ಕಾರಂತ ಹೇಳಿದರು.
ಸಾಲಿಗ್ರಾಮ ಗುರುನರಸಿಂಹ ದೇವ ಸ್ಥಾನದ ಜ್ಞಾನಮಂದಿರದಲ್ಲಿ ಭಾನು ವಾರ ನಡೆದ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಉದ್ಘಾ ಟಿಸಿ ಅವರು ಮಾತನಾಡಿದರು.
ಮಂಗಳೂರು ಎಸಿಸಿ ಸಿಮೆಂಟ್ ಕಂಪೆ ನಿಯ ತಾಂತ್ರಿಕ ಸೇವೆಯ ಪ್ರಬಂಧಕ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಪ್ರಸಾದ್ ನೇತ್ರಾಲಯದ ಡಾ.ನಿತ್ಯಾನಂದ ನಾಯಕ್, ಡಾ. ಸಂಶೀರ್, ನರ್ಸ್ ವಿಕ್ಟೋರಿಯಾ, ಕಟ್ಟಡ ನಿರ್ಮಾಣ ಕಾರ್ಮಿಕ ಸಂಘಟನೆ ಸಾಲಿಗ್ರಾಮ ಘಟಕದ ರಾಮ ಹಂದಟ್ಟು ಮತ್ತಿತರರು ಉಪಸ್ಥಿತರಿದ್ದರು.
ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಬ್ರಹ್ಮಾವರ ವಲಯದ ಅಧ್ಯಕ್ಷ ಪಿ.ನಾಗರಾಜ ಸೋಮಯಾಜಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಗುರುನರಸಿಂಹ ದೇವಸ್ಥಾನ, ಮಂಗಳೂರು ಎಸಿಸಿ ಸಿಮೆಂಟ್ ಕಂಪೆನಿ, ಉಡುಪಿಯ ಪ್ರಸಾದ್ ನೇತ್ರಾಲಯ, ನೇತ್ರಜ್ಯೋತಿ ಚಾರಿಟಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಅಂಧತ್ವ ವಿಭಾಗ, ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿ ಯರ್ಸ್ ಬ್ರಹ್ಮಾವರ ವಲಯ ಮತ್ತು ಬ್ರಹ್ಮಾವರ ವಲಯ ಸಾಲಿಗ್ರಾಮದ ಕಟ್ಟಡ ನಿರ್ಮಾಣ ಕಾರ್ಮಿಕ ಸಂಘಟನೆ ಜಂಟಿಯಾಗಿ ಆಯೋಜಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.