ADVERTISEMENT

ಹಿರಿಯ ಕ್ರೀಡಾಪಟು ಜ್ಯೋತಿ ಶೆಟ್ಟಿ ನಿಧನ

​ಪ್ರಜಾವಾಣಿ ವಾರ್ತೆ
Published 11 ಜೂನ್ 2018, 6:14 IST
Last Updated 11 ಜೂನ್ 2018, 6:14 IST

ಉಡುಪಿ: ರಾಷ್ಟ್ರೀಯ ಹಾಗೂ ಅಂತರ ರಾಷ್ಟ್ರೀಯ ಹಿರಿಯ ಮಹಿಳಾ ಕ್ರೀಡಾಪಟು ಜ್ಯೋತಿ ಶೆಟ್ಟಿ (51) ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಶನಿವಾರ ಸಹೋದರ ಶ್ರೀನಿವಾಸ ಶೆಟ್ಟಿ ಅವರ ಜತೆ ಬೈಕಿನಲ್ಲಿ ಉಡುಪಿಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದಾಗ ಅಂಬಾಗಿಲಿನ ಸಮೀಪ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟರು. ಅವರಿಗೆ ಪತಿ, ಪುತ್ರ, ಪುತ್ರಿ ಇದ್ದಾರೆ.

ಜ್ಯೋತಿ ಅವರು ಎಸ್ಸೆಸ್ಸೆಲ್ಸಿ ಬಳಿಕ ಶಿಕ್ಷಣವನ್ನು ಮೊಟಕುಗೊಳಿಸಿದ್ದರು. ಮದುವೆಯಾದ ಬಳಿಕ ಮ‌ತ್ತೆ ಕ್ರೀಡಾ ಆಸಕ್ತಿ ಮೊಳೆತು, ಅಭ್ಯಾಸದಲ್ಲಿ ತೊಡಗಿದ್ದರು. 2011ರಲ್ಲಿ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದರು. ಹೈಜಂಪ್, ಲಾಂಗ್ ಜಂಪ್, ಶಾಟ್ ಪಟ್, ಓಟ, ಮ್ಯಾರಥಾನ್‌ನಲ್ಲಿ ಪ್ರಶಸ್ತಿ ಗೆದ್ದಿದ್ದರು. ಸಮಾಜಸೇವೆ ಮೂಲಕವೂ ಗುರುತಿಸಿಕೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.