ಹಿರಿಯಡಕ: “ರಾಜಕೀಯ ಪಕ್ಷಗಳ ನಡುವಿನ ಸ್ಪರ್ಧೆ ಎಂಬುದು ಜನರ ಸಮಸ್ಯೆಗಳನ್ನು ನಿವಾರಿಸುವುದರಲ್ಲಿ ಇರಬೇಕು. ಚುನಾವಣೆಯನ್ನು ಸ್ಪರ್ಧಾ ತ್ಮಕ ಹೋರಾಟದ ಮೂಲಕ ಎದುರಿ ಸಬೇಕು ಎಂದು ಸಂಸದ ಜಯಪ್ರಕಾಶ್ ಹೆಗ್ಡೆ ಹೇಳಿದರು.
ಭಾನುವಾರ ಪೆರ್ಡೂರಿನಲ್ಲಿ ಕಾಂಗ್ರೆಸ್ ನ ಪೆರ್ಡೂರು, ಭೈರಂಪಳ್ಳಿ, ಕುಕ್ಕೆಹ ಳ್ಳಿಯ ಸ್ಥಾನೀಯ ಸಮಿತಿ ಹಾಗೂ ಮಹಿಳಾ ಕಾಂಗ್ರೆಸ್, ಯೂತ್ ಕಾಂಗ್ರೆಸ್ ಜಂಟಿಯಾಗಿ ಏರ್ಪಡಿಸಿದ್ದ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಾವು ಸಂಸದರಾಗಿ ಈ ಕ್ಷೇತ್ರದಲ್ಲಿ ನಿರ್ವಹಿಸಿದ ಅಭಿವೃದ್ಧಿ ಕಾಮ ಗಾರಿಗಳು ತಮ್ಮ ವಿರೋಧ ಪಕ್ಷದವರಿಗೆ ಸೂಕ್ತ ಉತ್ತರ ನೀಡುತ್ತಿದೆ. ತಾವು ಸಂಸದರಾದ ಬಳಿಕ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಹೆಚ್ಚಿನ ಮಹತ್ವ ನೀಡಿದ್ದು, ತಮ್ಮ ಈ ಜನಪರ ಕಾಳಜಿ ಹೊಂದಿ ರುವ ಕೆಲಸಗಳನ್ನು ನೋಡಿರುವ ಈ ಕ್ಷೇತ್ರದ ಜನತೆ ಮತ್ತೆ ತಮ್ಮನ್ನು ಸಂಸದರಾಗಿ ಗೆಲ್ಲಿಸುವ ಭರವಸೆಯಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ರಾಜ್ಯ ಸರ್ಕಾರವು ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ನೀಡಿದ 165 ಭರವಸೆಗಳಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ 8 ತಿಂಗಳಿನಲ್ಲಿ ಈಗಾಗಲೆ 95 ಭರವಸೆಗಳನ್ನು ಈಡೇರಿಸಿದೆ. ಈ ಹಿಂದೆ ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಪಡಿತರ ಚೀಟಿಯಲ್ಲಿ ಸೃಷ್ಟಿಸಿದ ಗೊಂದಲಗಳನ್ನು ಸಿದ್ದರಾರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿವಾರಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ್‌ಗಳನ್ನು ನೀಡುವ ಕೆಲಸಕ್ಕೆ ಚಾಲನೆ ನೀಡಿದೆ. ‘ಬಿಜೆಪಿ ಧರ್ಮಗಳ ನಡುವೆ, ಜಾತಿಗಳ ನಡುವೆ, ಭಾಷೆಗಳ ನಡುವೆ ವಿಷ ಬೀಜವನ್ನು ಬಿತ್ತುವ ಕೆಲಸವನ್ನು ನಡೆಸುತ್ತಿದೆ’ ಎಂದರು.
ಮಾಜಿ ಶಾಸಕ ಗೋಪಾಲ್ ಭಂಡಾರಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಭುಜಂಗ್ ಶೆಟ್ಟಿ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವೆರೋನಿಕಾ ಕರ್ನೇ ಲಿಯೋ. ಜಿಲ್ಲಾ ಪಂಚಾಯಿತಿ ಸದಸ್ಯೆ ಗೋಪಿ ನಾಯ್ಕ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ, ಪೆರ್ಡೂರು ಸ್ಥಾನೀಯ ಸಮಿತಿ ಅಧ್ಯಕ್ಷ ವಸಂತ್ ಕುಮಾರ್ ಶೆಟ್ಟಿ, ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಶಿವ ಕುಮಾರ್. ಉಪಾಧ್ಯಕ್ಷ ಸುನೀಲ್ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.
ನಿಖಿಲ್ ಅಡಿಗ ಪ್ರಾರ್ಥಿಸಿದರು, ರಾಜ್ ಕುಮಾರ್ ಶೆಟ್ಟಿ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.