ಕಾರ್ಕಳ: ತಾಲ್ಲೂಕಿನ ಮುಂಡ್ಕೂರು ಎಂಬಲ್ಲಿ ತೋಟದ ಮನೆಯಲ್ಲಿ ಅಡಿಕೆ ಕಳುವಾಗಿರುವ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು 12 ಜನ ಆರೋಪಿಗಳನ್ನು ಬಂಧಿಸಿ, ₹5 ಲಕ್ಷ ಮೌಲ್ಯದ 1,100 ಕೆ.ಜಿ. ಅಡಿಕೆ ವಶಪಡಿಸಿಕೊಂಡಿದ್ದಾರೆ.
ಸಿಪಿಐ ಮಂಜಪ್ಪ ನೇತೃತ್ವದಲ್ಲಿ ಗ್ರಾಮಾಂತರ ಠಾಣೆ ಪಿಎಸ್ಐ ಪ್ರಸನ್ನ ಎಂ.ಎಸ್, ಸುಂದರ, ಎಸ್ಐ ಪ್ರಕಾಶ್ ಸುಂದರ ಗೌಡ, ಸಿಬ್ಬಂದಿ ರುದ್ರೇಶ್, ಚಂದ್ರಶೇಖರ, ಮಹಾಂತೇಶ್, ಜಿಲ್ಲಾ ಪೊಲೀಸ್ ಕಚೇರಿ ಸಿಡಿಆರ್ ಸಿಬ್ಬಂದಿ ದಿನೇಶ್ ನಿತಿನ್ ಅವರ ತಂಡ ಕಾರ್ಯಾಚರಣೆ ನಡೆಸಿದೆ.
ಆರೋಪಿಗಳು ಕಾನೂನು ಸಂಘರ್ಷಕ್ಕೆ ಒಳಪಟ್ಟಿರುವವರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.