ADVERTISEMENT

ಉಡುಪಿ: 126 ಮಂದಿಯಲ್ಲಿ ಕೋವಿಡ್‌ ಸೋಂಕು

ಇಳಿಮುಖವಾಗುತ್ತಿರುವ ಸೋಂಕಿತರ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2020, 16:07 IST
Last Updated 13 ಸೆಪ್ಟೆಂಬರ್ 2020, 16:07 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ಉಡುಪಿ: ಜಿಲ್ಲೆಯಲ್ಲಿ ಭಾನುವಾರ 126 ಮಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ 53, ಕುಂದಾಪುರದ 47, ಕಾರ್ಕಳದ 20 ಹಾಗೂ ಇತರೆ ಜಿಲ್ಲೆಗಳ 6 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಪ್ರಾಥಮಿಕ ಸಂಪರ್ಕದಿಂದ 30, ಶೀತಜ್ವರದ ಲಕ್ಷಣಗಳಿದ್ದ 46, ತೀವ್ರ ಉಸಿರಾಟದ ಸಮಸ್ಯೆ ಇದ್ದ 11 ಹಾಗೂ ಅಂತರ ಜಿಲ್ಲೆಗಳ ಪ್ರವಾಸ ಮಾಡಿದ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 33 ಜನರ ಸೋಂಕಿನ ಮೂಲ ಪತ್ತೆಯಾಗಿಲ್ಲ.

69 ರೋಗಿಗಳಲ್ಲಿ ರೋಗದ ಲಕ್ಷಣಗಳು ಕಂಡುಬಂದರೆ, 57 ಜನರಲ್ಲಿ ಲಕ್ಷಣಗಳು ಪತ್ತೆಯಾಗಿಲ್ಲ. ಸೋಂಕಿತರಲ್ಲಿ 69 ಪುರುಷರು, 57 ಮಹಿಳೆಯರು ಇದ್ದಾರೆ.

ADVERTISEMENT

ಪ್ರಾಥಮಿಕ ಸಂಪರ್ಕ ಹಾಗೂ ರೋಗ ಲಕ್ಷಣಗಳಿದ್ದ2,019 ಶಂಕಿತರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 154 ರೋಗಿಗಳು ಗುಣಮುಖರಾಗಿದ್ದಾರೆ. ಇದುವರೆಗೂ 12,176 ಮಂದಿ ಸೋಂಕು ಮುಕ್ತರಾಗಿದ್ದು, ಜಿಲ್ಲೆಯಲ್ಲಿ 1732 ಸಕ್ರಿಯ ಸೋಂಕಿತ ಪ್ರಕರಣಗಳಿವೆ. 14,038 ಒಟ್ಟು ಪ್ರಕರಣಗಳಿವೆ. 130 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.