ADVERTISEMENT

ಉಡುಪಿ: ಜಿಲ್ಲೆಯಲ್ಲಿ 136 ಮಂದಿಗೆ ಕೋವಿಡ್ ಸೋಂಕು

ಇಬ್ಬರು ಸೋಂಕಿತರು ಸಾವು: ಮೃತರ ಸಂಖ್ಯೆ 35ಕ್ಕೇರಿಕೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2020, 16:24 IST
Last Updated 1 ಆಗಸ್ಟ್ 2020, 16:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಡುಪಿ: ಜಿಲ್ಲೆಯಲ್ಲಿ ಶನಿವಾರ ಇಬ್ಬರು ಕೋವಿಡ್‌ ಸೋಂಕಿತರು ಮೃತಪ‍ಟ್ಟಿದ್ದು, ಸಾವಿನ ಸಂಖ್ಯೆ 35 ಕ್ಕೇರಿಕೆಯಾಗಿದೆ. 136 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಉಡುಪಿ ತಾಲ್ಲೂಕಿನ 65, ಕುಂದಾಪುರದ 37 ಹಾಗೂ ಕಾರ್ಕಳ ತಾಲ್ಲೂಕಿನ 33 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರಲ್ಲಿ 70 ಪುರುಷರು, 66 ಮಹಿಳೆಯರು ಇದ್ದಾರೆ.

ರೋಗದ ಲಕ್ಷಣಗಳಿದ್ದವರಿಗೆ ಕೋವಿಡ್‌ ಆಸ್ಪತ್ರೆಗಳಲ್ಲಿ ಹಾಗೂ ರೋಗ ಲಕ್ಷಣಗಳಿಲ್ಲದ 753 ಮಂದಿಗೆ ಹೋಂ ಐಸೊಲೇಷನ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಶನಿವಾರ 100 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 2,646 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

736 ಮಾದರಿ ಸಂಗ್ರಹ:ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ 736 ಜನರ ಮಾದರಿ ಸಂಗ್ರಹಿಸಲಾಗಿದ್ದು, 446 ವರದಿಗಳು ಬರುವುದು ಬಾಕಿ ಇದೆ. ಸೋಂಕಿನ ಲಕ್ಷಣಗಳು ಕಂಡುಬಂದ 30 ಮಂದಿಯನ್ನು ಐಸೊಲೇಷನ್‌ ವಾರ್ಡ್‌ಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,492ಕ್ಕೇರಿಕೆಯಾಗಿದ್ದು, 1,811 ಸಕ್ರಿಯ ಸೋಂಕಿತ ಪ್ರಕರಣಗಳು ಬಾಕಿ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.