ADVERTISEMENT

17 ದಿನ ಏಕಾಂತವಾಸ ಕಠಿಣ ಸನ್ನಿವೇಶ: ರಘುಪತಿ ಭಟ್‌

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2020, 16:44 IST
Last Updated 26 ಅಕ್ಟೋಬರ್ 2020, 16:44 IST
ರಘುಪತಿ ಭಟ್‌, ಶಾಸಕ
ರಘುಪತಿ ಭಟ್‌, ಶಾಸಕ   

ಉಡುಪಿ: ಕೋವಿಡ್‌ ತಗುಲಿದ ಬಳಿಕ 17 ದಿನ ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದು, ಮಂಗಳವಾರದಿಂದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಶಾಸಕ ರಘುಪತಿ ಭಟ್‌ ತಿಳಿಸಿದ್ದಾರೆ.

ಕೋವಿಡ್‌ ಬಗೆಗಿನ ಅನುಭವಗಳನ್ನು ಹಂಚಿಕೊಂಡಿರುವ ಅವರು, ‘ಕೆಲವು ದಿನಗಳ ಹಿಂದೆ ಸಣ್ಣ ಕೆಮ್ಮು ಕಾಣಿಸಿಕೊಂಡಿತ್ತು. ಪರೀಕ್ಷೆ ಮಾಡಿಸಿಕೊಂಡಾಗ ಕೋವಿಡ್‌ ದೃಢಪಟ್ಟಿದ್ದರಿಂದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಅಗತ್ಯ ಪರೀಕ್ಷೆಗಳನ್ನು ಮಾಡಿಸಿಕೊಂಡು ಹೋಂ ಐಸೊಲೇಷನ್‌ನಲ್ಲಿರಬೇಕಾಯಿತು. 17 ದಿನ ಏಕಾಂತವಾಗಿ ಕಾಲ ಕಳೆಯಬೇಕಾಗಿದ್ದು ಜೀವನದ ಕಠಿಣ ಸನ್ನಿವೇಶ’ ಎಂದು ಶಾಸಕರು ತಿಳಿಸಿದ್ದಾರೆ.

‘ಕೋವಿಡ್‌ ತಡೆಗೆ ಕಡ್ಡಾಯವಾಗಿ ಮಾಸ್ಕ್‌ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸ್‌ ಬಳಸುವುದು ಬಹಳ ಮುಖ್ಯ. ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ. ಸೋಂಕಿಗೆ ಲಸಿಕೆ ಕಂಡುಹಿಡಿಯುವವರೆಗೂ ಸುರಕ್ಷತಾ ಕ್ರಮಗಳನ್ನು ಪಾಲಿಸಿ’ ಎಂದು ಶಾಸಕ ರಘುಪತಿ ಭಟ್‌ ಸಲಹೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.