
ಪ್ರಜಾವಾಣಿ ವಾರ್ತೆ
ಉಡುಪಿ: ಜಿಲ್ಲೆಯಲ್ಲಿ ಸೋಮವಾರ 18 ಮಂದಿಯಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದೆ.13 ಪುರುಷರು, ಮೂವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ.
ಸೋಮವಾರ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ 35 ಮಂದಿಯ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. 209 ವರದಿಗಳು ಬರುವುದು ಬಾಕಿ ಇದೆ. ಸೋಂಕಿನ ಲಕ್ಷಣಗಳು ಕಂಡುಬಂದ 10 ಜನರನ್ನು ಐಸೊಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ.ಸೋಂಕಿತರ ಸಂಖ್ಯೆ 1197ಕ್ಕೇರಿಯಾಗಿದ್ದು, 139 ಸಕ್ರಿಯ ಪ್ರಕರಣಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.