ಬ್ರಹ್ಮಾವರ (ಉಡುಪಿ ಜಿಲ್ಲೆ): ರೋಸ್ ಸಮಾರಂಭದಲ್ಲಿ ಭಾಗವಹಿಸಿದ್ದ ಯುವತಿ ಹಠಾತ್ ಕುಸಿದುಬಿದ್ದು ಸಾವನಪ್ಪಿದ ಘಟನೆ ಬ್ರಹ್ಮಾವರ ತಾಲ್ಲೂಕಿನ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ.
ಜ್ಯೋತ್ಸ್ನಾ ಮರಿಯಾಕೋಸ್ (23) ಮೃತಪಟ್ಟ ಯುವತಿ. ಸಂಬಂಧಿಕರ ಮನೆಯಲ್ಲಿ ಆಯೋಜಿಸಿದ್ದ ರೋಸ್ ಸಮಾರಂಭದಲ್ಲಿ (ಕ್ರೈಸ್ತರಲ್ಲಿ ಮದುವೆ ಮುನ್ನ ನಡೆಯುವ ಕಾರ್ಯಕ್ರಮ) ಭಾಗವಹಿಸಿದ್ದ ಜ್ಯೋತ್ಸ್ನಾ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು.
ಕೂಡಲೇ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟರು. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.