ADVERTISEMENT

ಸಕ್ರಿಯ ಸೋಂಕಿತರ ಸಂಖ್ಯೆ ತೀವ್ರ ಇಳಿಮುಖ

ಉಡುಪಿ: 13 ಮಂದಿಗೆ ಕೋವಿಡ್‌, 179 ಸಕ್ರಿಯ ಪ್ರಕರಣ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 16:59 IST
Last Updated 24 ನವೆಂಬರ್ 2020, 16:59 IST

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 13 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. ಉಡುಪಿ, ಕುಂದಾಪುರದ ತಲಾ 6 ಹಾಗೂ ನೆರೆಯ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ. ಸೋಂಕಿತರಲ್ಲಿ 7 ಪುರುಷರು, 6 ಮಹಿಳೆಯರು ಇದ್ದಾರೆ.

ಮಂಗಳವಾರ 15 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 22,170 ಮಂದಿ ಗುಣವಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 22,536 ಇದ್ದು, 179 ಸಕ್ರಿಯ ಸೋಂಕಿತರು ಇದ್ದಾರೆ. 179 ಮಂದಿಗೆ ಸೋಂಕಿನಿಂದ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT