ADVERTISEMENT

ಸರ್ವ ಜನರ ಸಂವಿಧಾನ ಸಮಾವೇಶ 28ರಂದು

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2019, 16:25 IST
Last Updated 17 ಸೆಪ್ಟೆಂಬರ್ 2019, 16:25 IST
ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು ಮಂಗಳವಾರ ಪ್ರೆಸ್‌ಕ್ಲಬ್‌ನಲ್ಲಿ ಸರ್ವ ಜನರ ಸಂವಿಧಾನದ ಸಮಾವೇಶದ  ಕರಪತ್ರವನ್ನು ಬಿಡುಗಡೆಗೊಳಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು ಮಂಗಳವಾರ ಪ್ರೆಸ್‌ಕ್ಲಬ್‌ನಲ್ಲಿ ಸರ್ವ ಜನರ ಸಂವಿಧಾನದ ಸಮಾವೇಶದ  ಕರಪತ್ರವನ್ನು ಬಿಡುಗಡೆಗೊಳಿಸಿದರು.   

ಉಡುಪಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ (ಅಂಬೇಡ್ಕರ್ ವಾದ) ಸೆ.28ರಂದು ನಗರದ ಬಾಸೆಲ್‌ ಮಿಷನರೀಸ್‌ ಮೊಮೊರಿಯಲ್‌ ಸಭಾಂಗಣದಲ್ಲಿ ಸರ್ವ ಜನರ ಸಂವಿಧಾನದ ಸಮಾವೇಶ ಹಮ್ಮಿಕೊಳ್ಳಲಾಗಿದ ಎಂದು ಸಮಿತಿಯ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಕಾರ್ಯಕ್ರಮವನ್ನು ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಉದ್ಘಾಟಿಸಲಿದ್ದಾರೆ. ತೋಂಟದಾರ್ಯ ಶಾಖಾಮಠದ ನಿಜಗುಣ ಪ್ರಭು ಸ್ವಾಮೀಜಿ ಮಾತನಾಡಲಿದ್ದಾರೆ. ಎಸ್‌ಸಿ, ಎಸ್‌ಟಿ ಗುತ್ತಿಗೆದಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಮಹಾದೇವಸ್ವಾಮಿ, ಮುಖಂಡರಾದ ಕೆ.ಎಲ್‌.ಅಶೋಕ್, ಅಖಿಲ ಭಾರತ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಜತ್ತನ್ನ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಅಂದು ಬೆಳಿಗ್ಗೆ 10.30ಕ್ಕೆ ನಗರದ ಬೋರ್ಡ್‌ ಹೈಸ್ಕೂಲ್‌ನಿಂದ ಮೆರವಣಿಗೆ ನಡೆಯಲಿದ್ದು, ಪ್ರಮುಖ ರಸ್ತೆಗಳಿಗೆ ಸಾಗಲಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸುಂದರ್ ಮಾಸ್ತರ್ ಮನವಿ ಮಾಡಿದ್ದಾರೆ.

ADVERTISEMENT

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಅಣ್ಣಪ್ಪ ಕಾರ್ಕಳ, ಸುಂದರ್ ತೆಕ್ಕಟ್ಟೆ, ಪರಮೇಶ್ವರ ಉಪ್ಪೂರು, ಲೋಕೇಶ್ ಪಡುಬಿದ್ರಿ, ಶಿವಾನಂದ ಮೂಡುಬೆಟ್ಟು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.