ADVERTISEMENT

ಉಡುಪಿ: 293 ಮಂದಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2020, 15:37 IST
Last Updated 20 ಸೆಪ್ಟೆಂಬರ್ 2020, 15:37 IST

ಉಡುಪಿ: ಜಿಲ್ಲೆಯಲ್ಲಿ 293 ಮಂದಿಗೆ ಭಾನುವಾರ ಕೋವಿಡ್‌ ಸೋಂಕು ದೃಢಪಟ್ಟಿದೆ. ಉಡುಪಿ ತಾಲ್ಲೂಕಿನ 123, ಕುಂದಾಪುರದ 95, ಕಾರ್ಕಳದ 70 ಹಾಗೂ ಇತರೆ ಜಿಲ್ಲೆಗಳ ಐವರಿಗೆ ಸೋಂಕು ತಗುಲಿದೆ.

156 ಮಂದಿಯಲ್ಲಿ ಸೋಂಕಿನ ಲಕ್ಷಣಗಳಿದ್ದರೆ, 137 ಜನರಲ್ಲಿ ರೋಗದ ಲಕ್ಷಣಗಳಿಲ್ಲ. 82 ಸೋಂಕಿತರು ಕೋವಿಡ್‌ ಆಸ್ಪತ್ರೆಗಳಲ್ಲಿ, 211 ರೋಗಿಗಳು ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರ 1,202 ಶಂಕಿತರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. 215 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 13,836ಕ್ಕೇರಿಕೆಯಾಗಿದೆ. ಜಿಲ್ಲೆಯಲ್ಲಿ 1,415 ಸಕ್ರಿಯ ಸೋಂಕಿತ ಪ್ರಕರಣಗಳಿದ್ದು, ಒಟ್ಟು ಸೋಂಕಿತ ಪ್ರಕರಣಗಳು 15,391 ಇವೆ.ಮೃತ ಸೋಂಕಿತರ ಸಂಖ್ಯೆ 140ಕ್ಕೇರಿಕೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.