ADVERTISEMENT

ಕೋವಿಡ್‌ ಸೋಂಕಿತ ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 16 ಜುಲೈ 2020, 17:01 IST
Last Updated 16 ಜುಲೈ 2020, 17:01 IST

ಉಡುಪಿ: ಕುಂದಾಪುರ, ಬೈಂದೂರು ಹಾಗೂ ಉಡುಪಿಯಲ್ಲಿ ಕೋವಿಡ್‌–19 ಸೋಂಕಿತ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ.

ಮಧುಮೇಹ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಉಡುಪಿಯ 49 ವರ್ಷದ ವ್ಯಕ್ತಿ ಈಚೆಗೆ ಜಿಲ್ಲಾ ಆಸ್ಪತ್ರೆಯ ಐಸೊಲೇಷನ್‌ ವಾರ್ಡ್‌ಗೆ ದಾಖಲಾಗಿದ್ದರು. ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿತ್ತು. ತಕ್ಷಣ ಡಾ.ಟಿಎಂಎ ಪೈ ಕೋವಿಡ್‌ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬೈಂದೂರಿನ ಮರವಂತೆಯ 58 ವರ್ಷದ ಸೋಂಕಿತ ವ್ಯಕ್ತಿ ಬುಧವಾರ ಮೃತಪಟ್ಟಿದ್ದಾರೆ. ತೀವ್ರ ಅಸ್ತಮಾದಿಂದ ಬಳಲುತ್ತಿದ್ದ ವೃದ್ಧರನ್ನು ನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ಕರೆತರುವಾಗ ಸಾವನ್ನಪ್ಪಿದ್ದಾರೆ. ಬಳಿಕ ಅವರ ಗಂಟಲ ದ್ರವದ ಮಾದರಿಯನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೊಳಪ‍ಡಿಸಿದಾಗ ಸೋಂಕು ಪತ್ತೆಯಾಗಿದೆ.

ADVERTISEMENT

ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಜಿಲ್ಲೆಯಲ್ಲಿ ಇದುವರೆಗೂ 8 ಮಂದಿ ಕೋವಿಡ್‌ ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.