ADVERTISEMENT

ನೆರೆ ಹಾನಿ: ಉಡುಪಿಗೆ ₹40 ಕೋಟಿ ಬಿಡುಗಡೆಗೆ ಸಿಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 15:35 IST
Last Updated 27 ಸೆಪ್ಟೆಂಬರ್ 2020, 15:35 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಉಡುಪಿ: ಜಿಲ್ಲೆಯಲ್ಲಿ ಸಂಭವಿಸಿದ ನೆರೆ ಹಾನಿ ಪರಿಹಾರ ಕಾರ್ಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ₹ 40 ಕೋಟಿ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದಾರೆ ಎಂದು ಶಾಸಕ ರಘುಪತಿ ಭಟ್‌ ತಿಳಿಸಿದ್ದಾರೆ.

ಜಿಲ್ಲೆಯ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಆರ್.ಮೆಂಡನ್, ವಿ. ಸುನೀಲ್ ಕುಮಾರ್, ಸುಕುಮಾರ್ ಶೆಟ್ಟಿ ಅವರನ್ನೊಳಗೊಂಡ ಶಾಸಕರ ತಂಡ ಶನಿವಾರ ಮುಖ್ಯಮಂತ್ರಿಯನ್ನು ಭೇಟಿಯಾಗಿ ಪ್ರಾಕೃತಿಕ ವಿಕೋಪದಡಿ ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿತ್ತು.

ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಮೊದಲ ಹಂತದಲ್ಲಿ ₹ 40 ಕೋಟಿ ಬಿಡುಗಡೆಗೆ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್‌ಗೆ ಸೂಚನೆ ನೀಡಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿಯೂ ಉಡುಪಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಉಂಟಾದ ನಷ್ಟದ ಬಗ್ಗೆ ತಿಳಿಸಲಾಗಿತ್ತು ಎಂದು ತಿಳಿಸಿದ್ದಾರೆ.

ADVERTISEMENT

ಆಟೋ-ಟ್ಯಾಕ್ಸಿ ಚಾಲಕರಿಗೆ ಸರ್ಕಾರದ ಸಹಾಯಧನ ಪಡೆಯುವಲ್ಲಿ ತಾಂತ್ರಿಕ ಸಮಸ್ಯೆಗಳು ಉಂಟಾಗಿದ್ದು, ಕೂಡಲೇ ಸರಿಪಡಿಸಿ ಅರ್ಹರಿಗೆ ಸಹಾಯಧನ ನೀಡಬೇಕು ಎಂದು ಸದನದಲ್ಲಿ ಒತ್ತಾಯಿಸಲಾಯಿತು ಎಂದು ಶಾಸಕ ರಘುಪತಿ ಭಟ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.