ADVERTISEMENT

ಜೈವಿಕ ತ್ಯಾಜ್ಯ ಘಟಕ ಕಡ್ಡಾಯ ಮಾಡುವ ಚಿಂತನೆ ಇದೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2018, 6:34 IST
Last Updated 5 ಜನವರಿ 2018, 6:34 IST

ಉಡುಪಿ: ‘ನೂರು ಕೆಜಿಗಿಂತ ಅಧಿಕ ತ್ಯಾಜ್ಯ ಉತ್ಪತ್ತಿ ಮಾಡುವ ಸಂಸ್ಥೆಗಳು ಜೈವಿಕ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸುವುದನ್ನು ಕಡ್ಡಾಯ ಮಾಡುವುದನ್ನು ಬೈಲಾದಲ್ಲಿ ಸೇರಿಸುವ ಬಗ್ಗೆ ಚಿಂತನೆ ನಡೆದಿದೆ’ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದರು.

ಶ್ರೀ ಕೃಷ್ಣ ಮಠ ಮತ್ತು ಪರ್ಯಾಯ ಪೇಜಾವರ ಮಠದ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಜೈವಿಕ ತ್ಯಾಜ್ಯ ನಿರ್ವಹಣಾ ಘಟಕ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಂದು ನಗರದಲ್ಲಿ ಕಸ ವಿಲೇವಾರಿ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಸ್ವಚ್ಛ ಮಿಷನ್ ಯೋಜನೆಗೆ ಚಾಲನೆ ನೀಡಿಲಾಗಿದೆ. ಜೈವಿಕ ತ್ಯಾಜ್ಯ ನಿರ್ವಹಣಾ ಘಟಕ ಶ್ರೀ ಕೃಷ್ಣ ಮಠದಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನದಲ್ಲಿ ಪ್ರತಿಯೊಂದು ಕಲ್ಯಾಣ ಮಂಟಪ, ದೇವಸ್ಥಾನ ಹಾಗೂ ಖಾಸಗಿ ವಲಯದಲ್ಲಿ ಆಳವಡಿಸುವಂತಾಗ ಬೇಕು ಎಂದರು.

ADVERTISEMENT

ನಿರ್ದೇಶಕ ಮಾಯಂಕ್ ಮಾತನಾಡಿ, ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಉಡುಪಿಯಲ್ಲಿ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ಶ್ರೀ ರವಿಶಂಕರ್ ಗುರೂಜಿ ಅವರ ಸಹಾಯದಿಂದ ಜೈವಿಕ ತ್ಯಾಜ್ಯ ನಿರ್ವಹಣಾ ಘಟಕ ಆಳವಡಿಸಲಾಗಿದೆ.ಮುಂದಿನ ದಿನದಲ್ಲಿ ತಿರುಪತಿ, ಧರ್ಮಸ್ಥಳದಲ್ಲಿ ಆಳವಡಿಸುವ ಯೋಚನೆ ಇದೆ.

ಸುಮಾರು 1000 ಕೆಜಿ ಸಾಮರ್ಥ್ಯ ಆಹಾರ ತ್ಯಾಜ್ಯವನ್ನು 400ಕೆಜಿ ಗೊಬ್ಬರವನ್ನು ತಯಾರಿಸಲು 8 ಗಂಟೆ ಸಮಯ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು. ಜಿಲ್ಲಾ ಪಂಚಾಯಿ ಕಾರ್ಯನಿರ್ವಣಾಧಿಕಾರಿ ಶಿವನಂದ ಕಾಪಶಿ, ಬ್ರಹ್ಮಾವರ ಕೃಷಿ ಕೇಂದ್ರ ಧನಂಜಯ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.