ADVERTISEMENT

ಉಡುಪಿ: ಆಮ್ಲಜನಕ ಸಾಂದ್ರಕ ಹಸ್ತಾಂತರ

​ಪ್ರಜಾವಾಣಿ ವಾರ್ತೆ
Published 5 ಜೂನ್ 2021, 5:29 IST
Last Updated 5 ಜೂನ್ 2021, 5:29 IST
ಧರ್ಮಸ್ಥಳ ಸಂಸ್ಥೆಯ ವತಿಯಿಂದ ಉಚಿತವಾಗಿ ನೀಡಲಾದ 5 ಆಮ್ಲಜನಕ ಸಾಂದ್ರಕಗಳನ್ನು ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಮುಖಾಂತರ ಉಡುಪಿ ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ನಾಗಭೂಷಣ ಉಡುಪ ಅವರಿಗೆ ಹಸ್ತಾಂತರ ಮಾಡಲಾಯಿತು
ಧರ್ಮಸ್ಥಳ ಸಂಸ್ಥೆಯ ವತಿಯಿಂದ ಉಚಿತವಾಗಿ ನೀಡಲಾದ 5 ಆಮ್ಲಜನಕ ಸಾಂದ್ರಕಗಳನ್ನು ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಮುಖಾಂತರ ಉಡುಪಿ ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ನಾಗಭೂಷಣ ಉಡುಪ ಅವರಿಗೆ ಹಸ್ತಾಂತರ ಮಾಡಲಾಯಿತು   

ಉಡುಪಿ: ಧರ್ಮಸ್ಥಳ ಸಂಸ್ಥೆಯ ವತಿಯಿಂದ ಉಚಿತವಾಗಿ ನೀಡಲಾದ 5 ಆಮ್ಲಜನಕ ಸಾಂದ್ರಕಗಳನ್ನು ಮಂಗಳವಾರ ಜಿಲ್ಲಾಧಿಕಾರಿ ಮುಖಾಂತರ ಉಡುಪಿ ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ನಾಗಭೂಷಣ ಉಡುಪ ಅವರಿಗೆ ಹಸ್ತಾಂತರ ಮಾಡಲಾಯಿತು.

ಈಗಾಗಲೇ ಧರ್ಮಸ್ಥಳ ಸಂಸ್ಥೆಯಿಂದ ಕೋವಿಡ್‌ಗೆ 5.5 ಟನ್ ಆಮ್ಲಜನಕವನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ಒದಗಿಸಿಕೊಡಲಾಗಿದೆ. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಒಟ್ಟು 6 ಯೋಜನಾ ಕಚೇರಿಗಳ ಮುಖಾಂತರ 6 ವಾಹನಗಳನ್ನು ಕೋವಿಡ್ ಸೋಂಕಿತ ರೋಗಿಗಳನ್ನು ಬಳಕಗೆ ನೀಡಲಾಗಿದೆ. 134 ರೋಗಿಗಳ ಸಂಚಾರಕ್ಕೆ ಬಳಸಿಕೊಳ್ಳಲಾಗಿದೆ ಎಂದು ಗಣೇಶ್ ಬಿ ತಿಳಿಸಿದರು.

ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ಗಣೇಶ್ ಬಿ, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ನವೀನ್ ಅಮೀನ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.