ADVERTISEMENT

ಉಡುಪಿ| ಮತ್ತೆ 6 ಕೋವಿಡ್‌ ಪ್ರಕರಣ

ಮೃತ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದ ಇಬ್ಬರಲ್ಲಿ ಸೋಂಕು

​ಪ್ರಜಾವಾಣಿ ವಾರ್ತೆ
Published 20 ಮೇ 2020, 13:23 IST
Last Updated 20 ಮೇ 2020, 13:23 IST
ಕೊರೊನಾ ವೈರಸ್‌
ಕೊರೊನಾ ವೈರಸ್‌   

ಉಡುಪಿ: ಜಿಲ್ಲೆಯಲ್ಲಿ ಬುಧವಾರ ಮತ್ತೆ 6 ಮಂದಿಯಲ್ಲಿ ಕೋವಿಡ್–19‌ ಸೋಂಕು ಕಾಣಿಸಿಕೊಂಡಿದೆ. ಮೂವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಒಬ್ಬ ಬಾಲಕನಿಗೆ ಸೋಂಕು ಇರುವುದು ದೃಢಪಟ್ಟಿದೆ.

ಮೃತ ವ್ಯಕ್ತಿಯ ಸಂಪರ್ಕ:ಈಚೆಗೆ ಕೋವಿಡ್‌ ಸೋಂಕಿನಿಂದ ಮೃತಪಟ್ಟಿದ್ದ ಕುಂದಾಪುರದ 54 ವರ್ಷದ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ 4 ವರ್ಷದ ಹಾಗೂ 15 ವರ್ಷದ ಬಾಲಕಿಗೆ ಸೋಂಕು ತಗುಲಿದೆ. ಮುಂಬೈನಿಂದ ಉಡುಪಿಗೆ ಬಂದು ಕ್ವಾರಂಟೈನ್‌ನಲ್ಲಿದ್ದ31, 47 ವರ್ಷದ ಮಹಿಳೆಯರು ಹಾಗೂ 55, 74 ವರ್ಷದ ಪುರುಷರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಕ್ವಾರಂಟೈನ್‌ನಲ್ಲಿದ್ದ ಸೋಂಕಿತರಿಗೆ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಜತೆಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ ಎಂದು ಮಾಹಿತಿ ನೀಡಿದರು.

ADVERTISEMENT

ಸೋಂಕಿತರ ಸಂಖ್ಯೆ 21ಕ್ಕೇರಿಕೆ:ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 21ಕ್ಕೇರಿಕೆಯಾಗಿದೆ. ಕೋವಿಡ್‌ನಿಂದ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಮೂವರು ಗುಣಮುಖರಾಗಿದ್ದಾರೆ.ಚಿತ್ರದುರ್ಗದ ಸೋಂಕಿತ ಬಾಲಕಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ. ಒಟ್ಟು ಜಿಲ್ಲೆಯಲ್ಲಿ 17 ಸಕ್ರಿಯ ಪ್ರಕರಣಗಳಿವೆ.

420 ಮಾದರಿ ಸಂಗ್ರಹ: ಬುಧವಾರ 420 ಮಂದಿಯ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ ಮೂವರು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳುತ್ತಿದ್ದು, ಸೋಂಕಿತರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿರುವ 50 ಜನರ ಹಾಗೂ ಹಾಟ್‌ಸ್ಟಾಟ್‌ಗಳಿಂದ ಬಂದು ಕ್ವಾರಂಟೈನ್‌ನಲ್ಲಿರುವ 354 ಜನರ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿದೆ.

20 ಮಂದಿ ಐಸೋಲೇಷನ್ ವಾರ್ಡ್‌ಗೆ ದಾಖಲು:ಬುಧವಾರ 14 ಪುರುಷರು ಹಾಗೂ 6 ಮಹಿಳೆಯರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು ಐಸೋಲೇಷನ್‌ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.