ADVERTISEMENT

ಕುಕ್ಕೆ ದೇಗುಲಕ್ಕೆ ₹ 80 ಕೋಟಿ ಮೌಲ್ಯದ ಚಿನ್ನದ ರಥ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2019, 20:07 IST
Last Updated 28 ಏಪ್ರಿಲ್ 2019, 20:07 IST
   

ಸುಬ್ರಹ್ಮಣ್ಯ: ನಾಗಾರಾಧನೆಗೆ ಪ್ರಸಿದ್ಧಿ ಪಡೆದಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ₹ 80 ಕೋಟಿ ವೆಚ್ಚದಲ್ಲಿ ನೂತನ ಚಿನ್ನದ ರಥ ನಿರ್ಮಾಣದ ಪ್ರಕ್ರಿಯೆಯನ್ನು ತಕ್ಷಣದಿಂದಲೇ ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ದೇವಳದ ಆಡಳಿತ ಮಂಡಳಿ ಸಭೆ ಸೋಮವಾರ ನಡೆಯಲಿದೆ.

2006 ರಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ವೇಳೆಯಲ್ಲಿ ನೂತನ ಚಿನ್ನದ ರಥ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ ದೊರಕಿತ್ತು. ಅಂದು ₹15 ಕೋಟಿ ವೆಚ್ಚದಲ್ಲಿ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿತ್ತು. ಟೆಂಡರ್ ಪ್ರಕ್ರಿಯೆ ಕೂಡ ನಡೆದಿತ್ತು. ಬಳಿಕ ದರ ನಿಗದಿಪಡಿಸುವಲ್ಲಿ ತಾಂತ್ರಿಕ ಅಡಚಣೆ ಉಂಟಾಗಿದ್ದರಿಂದ ರಥ ನಿರ್ಮಾಣ ಪ್ರಕ್ರಿಯೆ ಅರ್ಧಕ್ಕೆ ನಿಂತಿತ್ತು.

ಕುಕ್ಕೆ ದೇಗುಲದಲ್ಲಿ ರಥ ನಿರ್ಮಾಣವಾಗದೆ ಇದ್ದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಇರುವವರಿಗೆ ದೋಷ ಉಂಟಾಗುವ ಸಾಧ್ಯತೆ ಕುರಿತು ಜ್ಯೋತಿ ದ್ವಾರಕನಾಥ್ ಅವರಿಂದ ಸಲಹೆಗಳು ಬಂದ ಕಾರಣದಿಂದ ಹಾಲಿ ಮುಖ್ಯಮಂತ್ರಿ ಅವರು ಮುಜರಾಯಿ ಇಲಾಖೆಗೆ ಈ ಸಂಬಂಧ ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.