ಹೆಬ್ರಿ: ಇಲ್ಲಿನ ನಾಡ್ಪಾಲು ಜಕ್ಕನಮಕ್ಕಿ ಎಂಬಲ್ಲಿ ಶುಕ್ರವಾರ ಓವರ್ ಟೆಕ್ ಬರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಗಾಯಗೊಂಡಿದ್ದಾರೆ.
ಬೈಕನ್ನು ಕಾರೊಂದು ಓವರ್ ಟೇಕ್ ಮಾಡುವಾಗ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಸುಮಾರು ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರುಗಳು ಹಾಗೂ ಬೈಕ್ ನುಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಹೆಬ್ರಿ ಪಿಎಸ್ಐ ಮಹೇಶ್ ಟಿಎಂ ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ. ಅಪಘಾತದಿಂದ ಉಡುಪಿ–ಹೆಬ್ರಿ–ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.