ADVERTISEMENT

ಗಾಂಜಾ: ಜನಜಾಗೃತಿಗೆ ದೀವಟಿಗೆ ನಡಿಗೆ

ದುಷ್ಪರಿಣಾಮ ತಿಳಿಯದೆ ಯುವಜನರ ಬದುಕು ಹಾಳು: ಬಸ್ರೂರು ಅಪ್ಪಣ್ಣ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 5:18 IST
Last Updated 5 ಡಿಸೆಂಬರ್ 2022, 5:18 IST
ಮಾದಕ ವ್ಯಸನದ ವಿರುದ್ಧ ಜನಜಾಗೃತಿಗಾಗಿ ನಡೆದ ದೀವಟಿಗೆ ನಡಿಗೆಯನ್ನು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಉದ್ಘಾಟಿಸಿದರು
ಮಾದಕ ವ್ಯಸನದ ವಿರುದ್ಧ ಜನಜಾಗೃತಿಗಾಗಿ ನಡೆದ ದೀವಟಿಗೆ ನಡಿಗೆಯನ್ನು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಉದ್ಘಾಟಿಸಿದರು   

ಕುಂದಾಪುರ: ಗಾಂಜಾ‌ದಂಥ ಮಾದಕ ವಸ್ತುಗಳ ವ್ಯಸನದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವಿಲ್ಲದೆ ಯುವಜನರು ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಸ್ರೂರು ಅಪ್ಪಣ್ಣ ಹೆಗ್ಡೆ ಹೇಳಿದರು.

ಮೂಡುಗಿಳಿಯಾರಿನ ಜನಸೇವಾ ಟ್ರಸ್ಟ್ ಗಾಂಜಾ ವ್ಯಸನ ನಿರ್ಮೂಲನೆ ಅಂಗವಾಗಿಕೋಟೇಶ್ವರದ ರಥಬೀದಿಯಲ್ಲಿ ಹಮ್ಮಿಕೊಂಡಿದ್ದ ಜನಜಾಗೃತಿಗಾಗಿ ದೀವಟಿಗೆ ನಡಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪಶ್ಚಿಮ ಘಟ್ಟದಲ್ಲಿ ಗಾಂಜಾ ಬೆಳೆಯುತ್ತಿದ್ದಾರೆ. ಈ ಬಗ್ಗೆ ಗಮನಕ್ಕೆ ಬಂದರೆ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು. ಗಾಂಜಾ ಗಿಡ ನಾಶ ಮಾಡುವ ಮೂಲಕ‌ ಮುಂದಿನ ಪೀಳಿಗೆ ಆರೋಗ್ಯವಂತರಾಗಿರುವಂತೆ ಜಾಗ್ರತೆ ವಹಿಸಬೇಕು ಎಂದರು.

ADVERTISEMENT

ಜನಸೇವಾ ಟ್ರಸ್ಟ್‌ನ ವಸಂತ ಗಿಳಿಯಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಪತ್ರಕರ್ತ ಡಾ.ಸುಧಾಕರ ನಂಬಿಯಾರ್, ಉದ್ಯಮಿ ಮಾರ್ಕೋಡು ಸುಧೀರ್ ಕುಮಾರ್ ಶೆಟ್ಟಿ, ಕೋಟೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣ ಗೊಲ್ಲ, ಸದಸ್ಯ ಲೋಕೇಶ್ ಅಂಕದಕಟ್ಟೆ, ವಕೀಲ ಉಮೇಶ್ ಶೆಟ್ಟಿ ಶಾನ್ಕಟ್ಟು, ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಕ್ವಾಡಿ ಪ್ರಭಾಕರ ಶೆಟ್ಟಿ, ಬೈಂದೂರು ಭಾರತ್ ಸೇವಾದಳದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದ ಕಟ್ಟೆ, ಪ್ರವೀಣ್ ಯಕ್ಷಿಮಠ್, ಉದಯಕುಮಾರ್ ಶೆಟ್ಟಿ ಪಡುಕೆರೆ ಇದ್ದರು. ರಾಜೇಶ್ ಕೆ.ಸಿ ನಿರೂಪಿಸಿದರು. ಉದಯ್ ಶೆಟ್ಟಿ ಪಡುಕೆರೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.