ADVERTISEMENT

ಉಡುಪಿ: ಯುವತಿಗೆ ಚಾಕುವಿನಿಂದ ಇರಿದು ತಾನೂ ಕತ್ತು ಕೊಯ್ದುಕೊಂಡ ಯುವಕ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 17:13 IST
Last Updated 30 ಆಗಸ್ಟ್ 2021, 17:13 IST
ಚೂರಿ ಇರಿತದಿಂದ ಮೃತಪಟ್ಟ ಸೌಮ್ಯ
ಚೂರಿ ಇರಿತದಿಂದ ಮೃತಪಟ್ಟ ಸೌಮ್ಯ   

ಉಡುಪಿ: ಸಂತೆಕಟ್ಟೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಯುವಕನೊಬ್ಬ ಚಾಕುವಿನಿಂದ ಯುವತಿಗೆ ಇರಿದು, ತಾನೂ ಕತ್ತು ಕೊಯ್ದುಕೊಂಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಸೌಮ್ಯಶ್ರೀ ವಿಠಲ ಭಂಡಾರಿ (28) ಚಿಕಿತ್ಸೆಗೆ ಸ್ಪಂದಿಸದೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಯುವಕ ಸಂದೇಶ್‌ ಕುಲಾಲ್ (28) ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ. ಮೇಲ್ನೋಟಕ್ಕೆ ಪ್ರೇಮ ವೈಫಲ್ಯ ಕೃತ್ಯಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ವಿವರ: ಸಂತೆಕಟ್ಟೆಯ ರೋಬೊ ಸಾಫ್ಟ್‌ ಕಂಪೆನಿಯ ಎದುರು ಸೌಮ್ಯಶ್ರೀ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬೈಕ್‌ನಲ್ಲಿ ಬಂದ ಸಂದೇಶ್‌ ಏಕಾಏಕಿ ಚಾಕುವಿನಿಂದ ಇರಿದಿದ್ದಾನೆ. ಬಳಿಕ ತಾನೂ ಕುತ್ತಿಗೆಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರನ್ನೂ ಸ್ಥಳದಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.