ADVERTISEMENT

ಹೆಬ್ರಿ: ಆಧಾರ್‌ ಕಾರ್ಡ್‌ ತಿದ್ದುಪಡಿ, ಆರೋಗ್ಯ ತಪಾಸಣೆ ಶಿಬಿರ

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 11:48 IST
Last Updated 4 ಜೂನ್ 2025, 11:48 IST
ಆಧಾರ್‌ ಕಾರ್ಡ್‌ ತಿದ್ದುಪಡಿ ಮತ್ತು ಅರೋಗ್ಯ ತಪಾಸಣಾ ಶಿಬಿರವನ್ನು ಗ್ರಾ.ಪಂ. ಅಧ್ಯಕ್ಷೆ ಶಶಿಕಲಾ ಉದ್ಘಾಟಿಸಿದರು
ಆಧಾರ್‌ ಕಾರ್ಡ್‌ ತಿದ್ದುಪಡಿ ಮತ್ತು ಅರೋಗ್ಯ ತಪಾಸಣಾ ಶಿಬಿರವನ್ನು ಗ್ರಾ.ಪಂ. ಅಧ್ಯಕ್ಷೆ ಶಶಿಕಲಾ ಉದ್ಘಾಟಿಸಿದರು   

ಹೆಬ್ರಿ: ಕುಚ್ಚೂರು ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಅಂಚೆ ಇಲಾಖೆ, ಆರೋಗ್ಯ ಇಲಾಖೆ ಸಹಯೋಗದಲ್ಲಿ ಆಧಾರ್‌ ಕಾರ್ಡ್‌ ನೋಂದಣಿ, ತಿದ್ದುಪಡಿ ಹಾಗೂ ಆರೋಗ್ಯ ತಪಾಸಣಾ ಶಿಬಿರ ಮಂಗಳವಾರ ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಉದ್ಘಾಟಿಸಿದರು. ಉಪಾಧ್ಯಕ್ಷ ಮಹೇಶ ಶೆಟ್ಟಿ ಬಾದ್ಲು, ಅಂಚೆ ಇಲಾಖೆಯ ಗುರುಪ್ರಸಾದ್, ಆರೋಗ್ಯ ಇಲಾಖೆಯ ಡಾ.ರಮಾಮಣಿ ಮಾಹಿತಿ ನೀಡಿದರು.

ಅಂಚೆ ಇಲಾಖೆಯ ಅರುಂಧತಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಿತೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ ಶೆಟ್ಟಿ ಕಾನ್ಬೆಟ್ಟು, ಸತೀಶ ಪೂಜಾರಿ, ರಾಘವೇಂದ್ರ ಪೂಜಾರಿ, ಸುಕನ್ಯಾ ಕೃಷ್ಣಮೂರ್ತಿ, ಪತ್ರಕರ್ತ ನರೇಂದ್ರ ಎಸ್. ಮರಸಣಿಗೆ ಭಾಗವಹಿಸಿದ್ದರು. ಪಿಡಿಒ ರಿತೇಶ್ ನಿರೂಪಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.