ADVERTISEMENT

ಆಧಾರ್‌ ಕಾರ್ಡ್‌ ವಿತರಣಾ ಕೇಂದ್ರಗಳು ಮೇಲ್ದರ್ಜೆಗೆ

ಉಡುಪಿಯಲ್ಲಿ ಪೈಲಟ್‌ ಯೋಜನೆ ಅನುಷ್ಢಾನ: ಸಚಿವ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2019, 13:24 IST
Last Updated 27 ಸೆಪ್ಟೆಂಬರ್ 2019, 13:24 IST
ಮರಳುಗಾರಿಕೆ ಆರಂಭಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಸಿಐಟಿಯು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿನೀಡಿ ಮಾತನಾಡಿದರು.
ಮರಳುಗಾರಿಕೆ ಆರಂಭಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಸಿಐಟಿಯು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿನೀಡಿ ಮಾತನಾಡಿದರು.   

ಉಡುಪಿ: ಜನಸಾಮಾನ್ಯರಿಗೆ ಆಧಾರ್ ಕಾರ್ಡ್‌ಗಳು ಸಮರ್ಪಕವಾಗಿ ಸಿಗುತ್ತಿಲ್ಲ ಎಂಬ ದೂರುಗಳಿವೆ. ಆಧಾರ್ ಕಾರ್ಡ್‌ ವಿತರಣಾ ಕೇಂದ್ರಗಳನ್ನು ಹೆಚ್ಚಿಸಿ, ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಇದಕ್ಕೆ ವಿಶೇಷ ಅನುದಾನ ಅಗತ್ಯವಿರುವುದರಿಂದ ಪೈಲಟ್‌ ಪ್ರಾಜೆಕ್ಟ್‌ ಸಿದ್ಧಪಡಿಸಿ ಸಂಪುಟದಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಉಡುಪಿಯಲ್ಲಿ ಪ್ರಾಯೋಗಿಕವಾಗಿ ಪೈಲಟ್‌ ಯೋಜನೆ ಅನುಷ್ಠಾನಕ್ಕೆ ತರಲಾಗುವುದು ಎಂದರು.

ವಸತಿ ಯೋಜನೆಗಳ ಫಲಾನುಭವಿಗಳಿಗೆ 2 ವರ್ಷಗಳಿಂದ ಹಣ ಬಿಡುಗೆಡೆಯಾಗಿಲ್ಲ. ಈ ಬಗ್ಗೆ ವಿಶೇಷ ಸಭೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾ ಪಂಚಾಯ್ತಿ ಸಿಇಒಗೆ ಸೂಚಿಸಲಾಗಿದೆ. ವರದಿ ಸಲ್ಲಿಕೆ ಬಳಿಕ ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ಹಣ ಬಿಡುಗಡೆಗೆ ಸೂಚಿಸಲಾಗುವುದು ಎಂದರು.

ADVERTISEMENT

ಸಿಆರ್‌ಝೆಡ್‌ ವ್ಯಾಪ್ತಿಯಲ್ಲಿ ಮರಳು ತೆಗೆಯುವ ಪ್ರಕ್ರಿಯೆ ಆರಂಭವಾಗಿದೆ. ನಾನ್‌ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಮರಳು ತೆಗೆಯುವ ಕುರಿತು ಮತ್ತೊಂದು ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ವರಾಹಿ ಕುಡಿಯುವ ನೀರಿನ ಯೋಜನೆ ಹಲವು ಬಾರಿ ಬದಲಾವಣೆಗಳಾಗಿದ್ದು, ಸಮಸ್ಯೆಗಳ ಗೂಡಾಗಿದೆ. ನೀರು ರೈತರ ಜಮೀನಿಗೆ ಹರಿಸಲು ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ಬಳಿಕ, ಜಿಲ್ಲಾಧಿಕಾರಿ ಕಚೇರಿ ಎದುರು ಸಿಡಬ್ಲ್ಯುಎಫ್‌ಐ ಹಾಗೂ ಸಿಐಟಿಯು ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಭೇಟಿನೀಡಿದ ಬೊಮ್ಮಾಯಿ, ಕೆಲವೇ ದಿನಗಳಲ್ಲಿ ನಾನ್‌ಸಿಆರ್‌ಝೆಡ್‌ ವ್ಯಾಪ್ತಿಯಲ್ಲೂ ಮರಳು ತೆಗೆಯಲು ಒಪ್ಪಿಗೆ ಪಡೆಯಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.