ಪಡುಬಿದ್ರಿ: ‘ಆಟಿಯ ಆಹಾರಗಳು ದೈಹಿಕ ವ್ಯವಸ್ಥೆಗೆ ಶಕ್ತಿದಾಯಕವಾಗಿತ್ತು. ಹಾಳೆಯ ಮುಟ್ಟಾಲೆಯಿಂದ ಹಿಡಿದು ಬಳಸುವ ಪರಿಕರಗಳಿಗೆ ವೈಜ್ಞಾನಿಕ ಹಿನ್ನೆಲೆಯಿದೆ. ಅಂದು ಆಟಿಯು ಕಷ್ಟದ ಕಾಲವಾಗಿತ್ತು. ಇಂದು ವೈಭವೀಕರಣವಾಗುತ್ತಿದೆ’ ಎಂದು ಜಾನಪದ ಚಿಂತಕ ವಾಮನ ಕೋಟ್ಯಾನ್ ನಡಿಕುದ್ರು ಹೇಳಿದರು.
ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ, ಶ್ರೀ ನಾರಾಯಣಗುರು ಮಹಿಳಾ ಮಂಡಳಿ ಮತ್ತು ಕಲ್ಪತರು ಮಹಿಳಾ ಸ್ವಸಹಾಯ ಗುಂಪಿನ ಆಶ್ರಯದಲ್ಲಿ ನಡೆದ ‘ಆಟಿದ ಲೇಸ್ ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್, ‘ಕೊರೊನಾ ಬಳಿಕ ಜನರಿಗೆ ಆರೋಗ್ಯದ ಬಗ್ಗೆ ಕಾಳಜಿ ಮೂಡಿದೆ. ಆಟಿಯ ತಿಂಡಿ ತಿನಿಸುಗಳು ಹಲವಾರು ರೋಗಗಳನ್ನು ತಡೆಗಟ್ಟಲು ಸಹಕಾರಿಯಾಗಿದೆ’ ಎಂದರು.
ಪಡುಬಿದ್ರಿ ಸಿ.ಎ.ಸೊಸೈಟಿ ನಿರ್ದೇಶಕ ಗಿರೀಶ್ ಪಲಿಮಾರು ಮಾತನಾಡಿದರು. ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಬಿಲ್ಲವ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ರೋಹಿಣಿ ಆನಂದ್, ನಾರಾಯಣಗುರು ಸೇವಾದಳದ ದಳಪತಿ ಸಂತೋಷ್ ನಂದಿಕೂರು, ಬಿಲ್ಲವ ಸಂಘದ ಉಪಾಧ್ಯಕ್ಷ ರವಿ ಸಾಲ್ಯಾನ್, ಕಾರ್ಯದರ್ಶಿ ಲಕ್ಷ್ಮಣ ಪೂಜಾರಿ, ಕೋಶಾಧಿಕಾರಿ ಅಶೋಕ್ ಪೂಜಾರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.