ರಾಜೇಶ್ ಕುಮಾರ್
ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ರಾಜೇಶ್ ಕುಮಾರ್ ಬಂಧಿತ ಆರೋಪಿ. ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಮಾರ್ಗದರ್ಶನದಲ್ಲಿ ಎಸ್‌ಐ ಅಕ್ಷಯ ಕುಮಾರಿ ನೇತೃತ್ವದಲ್ಲಿ ಆರೋಪಿಯನ್ನು ಬೆಂಗಳೂರಿನ ಬನಶಂಕರಿ ಇಟ್ಟಮಡು ಎಂಬಲ್ಲಿ ಸಿಬ್ಬಂದಿ ರಾಜೇಶ್ ಮತ್ತು ಮಂಜುನಾಥ ಹಾವಂಜೆ ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.