ಉಡುಪಿ: ತರಕಾರಿ ಖರೀದಿಗೆ ಉಡುಪಿಗೆ ಬರುತ್ತಿದ್ದ ಗೂಡ್ಸ್ ವಾಹನ ಗುರುವಾರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತಕ್ಕೀಡಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಕುಂದಾಪುರದ ಚಾಲಕ ದಿನೇಶ್ ಹಾಗೂ ಸಹ ಪ್ರಯಾಣಿಕ ಮಂಜು ಮೃತರು. ಬ್ರಹ್ಮಾವರ ಕಡೆಯಿಂದ ಉಡುಪಿಗೆ ಬರುವಾಗ ಪುತ್ತೂರು ಗ್ರಾಮದ ಸಂತೆಕಟ್ಟೆ ಸಮೀಪ ಸೂಚನಾ ಫಲಕದ ಕಂಬಕ್ಕೆ ವಾಹನ ಡಿಕ್ಕಿ ಹೊಡೆದಿದೆ. ದಿನೇಶ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟರೆ, ಮಂಜು ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.
ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.