ಕುಂದಾಪುರ ತಾಲ್ಲೂಕಿನ ಕಮಲಶಿಲೆ ತಾರೆಕೊಡ್ಲು ಎಂಬಲ್ಲಿ ಕಡವೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾರೆ
ಕುಂದಾಪುರ: ಅರಣ್ಯದಿಂದ ಏಕಾಏಕಿ ರಸ್ತೆಗೆ ಬಂದ ಭಾರಿ ಗಾತ್ರದ ಕಡವೆಗೆ ಬೈಕ್ ಡಿಕ್ಕಿಯಾಗಿ ಸವಾರ ಹಾಗೂ ಕಡವೆ ಮೃತಪಟ್ಟ ಘಟನೆ ತಾಲ್ಲೂಕಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಕಮಲಶಿಲೆ ಸಮೀಪದ ತಾರೆಕೊಡ್ಲು ಎಂಬಲ್ಲಿ ಶನಿವಾರ ನಡೆದಿದೆ.
ಸಹ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾವ್ರಾಡಿ ಗ್ರಾಮದ ನೆಲ್ಲಿಕಟ್ಟೆಯ ಶೇಖರ ಮೊಗವೀರ ಎಂಬುವರ ಪುತ್ರ ಶ್ರೇಯಸ್ (22) ಹಾಗೂ ಪಡು ವಾಲ್ತೂರಿನ ವಿಘ್ನೇಶ್ (19) ಶನಿವಾರ ಕಮಲಶಿಲೆ ದೇವಸ್ಥಾನದಿಂದ ಮಧ್ಯಾಹ್ನ 2.30ರ ಸುಮಾರಿಗೆ ಮನೆಗೆ ತೆರಳುತ್ತಿದ್ದಾಗ ಅವಘಡ ನಡೆದಿದೆ. ಕಡವೆಯ ಕೋಡುಗಳು ದೇಹಕ್ಕೆ ನುಗ್ಗಿದ್ದರಿಂದ ಉಂಟಾದ ಗಾಯದಿಂದ ತೀವ್ರ ರಕ್ತಸ್ರಾವವಾಗಿ ಶ್ರೇಯಸ್ ಮೃತಪಟ್ಟಿದ್ದಾರೆ. ವಿಘ್ನೇಶ್ ಅವರನ್ನು ಚಿಕಿತ್ಸೆಗಾಗಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಶಂಕರನಾರಾಯಣ ಪೊಲೀಸ್ ಠಾಣೆ ಸಿಬ್ಬಂದಿ ಸಚಿನ್ ಪ್ರಕರಣ ದಾಖಲಿಸಿಕೊಂಡಿದ್ದು, ಸಿಪಿಐ ಜಯರಾಮ್ ಗೌಡ ಹಾಗೂ ಎಸ್‌ಐ ಶಂಭುಲಿಂಗ ಅವರು ತನಿಖೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.