ಉಡುಪಿ: 34 ವರ್ಷಗಳ ಹಿಂದಿನ ಪ್ರಕರಣದ ಆರೋಪಿಯನ್ನು ನಗರ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಚಿನ್ನುವಾಡು (55) ಬಂಧಿತ ಆರೋಪಿ.
ಶ್ರೀಗಂಧ ಕಳ್ಳತನಕ್ಕೆ ಸಂಬಂಧಿಸಿ 1990ರಲ್ಲಿ ಈತನ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೊಳೆಹೊನ್ನೂರಿನ ಹಕ್ಕಿಪಿಕ್ಕಿ ಕ್ಯಾಂಪ್‌ನಿಂದ ಆರೋಪಿಯನ್ನು ಬಂಧಿಸಲಾಗಿದೆ.
ನಗರ ಠಾಣೆಯ ಸಿಬ್ಬಂದಿ ಶಿವಕುಮಾರ್ ಹಾಗೂ ಹೇಮಂತ್ ಕುಮಾರ್ ಅವರು ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆ ತಂದಿದ್ದಾರೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.