ಆಲಿಯಾ ಅಸಾದಿ ಅವರ ಪೋಸ್ಟ್
ಉಡುಪಿ: ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಿದ ವಿವಾದದ ಕುರಿತು ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ಅವರು ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ್ದಾರೆ.
‘ಜನಿವಾರ ಹಾಕಿದ ಕಾರಣಕ್ಕೆ ಪರೀಕ್ಷೆ ಬಹಿಷ್ಕರಿಸಲ್ಪಟ್ಟ ಬ್ರಾಹ್ಮಣರ ಮತ್ತು ಹಿಜಾಬ್ ಕಾರಣ ಪರೀಕ್ಷೆ ಬಹಿಷ್ಕಾರಕ್ಕೊಳಗಾದ ಮುಸ್ಲಿಂ ಹೆಣ್ಣುಮಕ್ಕಳ ನೋವು ಒಂದೇ ಅಲ್ಲವೇ’ ಎಂದು ಅವರು ಪ್ರಶ್ನಿಸಿದ್ದಾರೆ.
‘ಮತ್ಯಾಕೆ ತಾರತಮ್ಯ... ಜನಿವಾರ ಬ್ರಾಹ್ಮಣರಿಗೆ ಎಷ್ಟು ಅಗತ್ಯವೋ ಹಿಜಾಬ್ ಕೂಡ ನಮಗೆ ಅಷ್ಟೇ ಅಗತ್ಯ. ಇಲ್ಲಿ ಜನಿವಾರ ಬೇಡವೆಂದ ಅಧಿಕಾರಿಯನ್ನು ತಕ್ಷಣ ಅಮಾನತು ಮಾಡ್ತಾರೆ, ಹಿಜಾಬಿಗಳಿಗೆ ಕಾಲೇಜು ಗೇಟ್ ಬಂದ್ ಮಾಡಿದ ಅಧಿಕಾರಿಗೆ ಯಾವ ಶಿಕ್ಷೆಯೂ ಇಲ್ಲ’ ಎಂದಿದ್ದಾರೆ.
‘ಬ್ರಾಹ್ಮಣ ವಿದ್ಯಾರ್ಥಿಗೆ ಉಚಿತ ಎಂಜಿನಿಯರಿಂಗ್ ಸೀಟ್ ನೀಡುತ್ತೀರಿ, ನಮ್ಮನ್ನು ಇದುವರೆಗೂ ಪರೀಕ್ಷೆ ಬರೆದಿದ್ದೀರೋ ಇಲ್ಲವೋ ಎಂದು ಸೌಜನ್ಯಕ್ಕಾದರೂ ಕೇಳಿಲ್ಲ, ಇದು ನಮ್ಮ ವ್ಯವಸ್ಥೆ’ ಎಂದು ಅವರು ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.