ಕುಂದಾಪುರ: ತಾಲ್ಲೂಕಿನ ಕುಂಭಾಶಿ ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿದ ಚಲನಚಿತ್ರ ನಟ ಉಪೇಂದ್ರ ಅವರು ದೇವರ ದರ್ಶನ ಪಡೆದು, ಅರ್ಚಕರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.
ದೇವಸ್ಥಾನದ ವತಿಯಿಂದ ಉಪೇಂದ್ರ ಅವರನ್ನು ಸತ್ಕರಿಸಿ ಗೌರವಿಸಲಾಯಿತು. ದೇವಸ್ಥಾನದ ಆಡಳಿತ ಮೊಕ್ತೇಸರ ರಮಣ ಉಪಾಧ್ಯಾಯ, ಅರ್ಚಕ, ಮಾಜಿ ಆಡಳಿತ ಮೊಕ್ತೇಸರ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಮೊಕ್ತೇಸರ ನಿರಂಜನ ಉಪಾಧ್ಯಾಯ, ಪರ್ಯಾಯ ಅರ್ಚಕ ಕೃಷ್ಣಾನಂದ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು, ವ್ಯವಸ್ಥಾಪಕ ನಟೇಶ್ ಕಾರಂತ, ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.