
ಬೈಂದೂರು (ಉಡುಪಿ): ‘ರಾಷ್ಟ್ರ, ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಸ್ವೀಕರಿಸಿದರೂ ಜನರಿಂದ ಜನರ ನಡುವೆಯೇ ಸ್ವೀಕರಿಸುವ ಪ್ರಶಸ್ತಿ ಉತ್ಕೃಷ್ಟವಾದುದು. ಕಲೆಯಿಂದಾಗಿ ಪ್ರಶಸ್ತಿ, ಗೌರವಗಳು ದೊರಕಿವೆ. ನೆಲ, ಜಲ, ಭಾಷೆಯ ಋಣ ತೀರಿಸಲು ಪ್ರಯತ್ನಿಸುವೆ’ ಎಂದು ನಟಿ ಉಮಾಶ್ರೀ ಹೇಳಿದರು.
ಇಲ್ಲಿನ ಶಾರದಾ ವೇದಿಕೆಯಲ್ಲಿ ಶನಿವಾರ ಸುರಭಿ ಬೈಂದೂರು ಸಾಂಸ್ಕೃತಿಕ ಸಾಹಿತ್ಯ, ಸೇವಾ ಪ್ರತಿಷ್ಠಾನದ ದಿ.ಹೊಸಾಡು ಸುಬ್ರಾಯ ಶೇರುಗಾರ್ ಸಂಸ್ಮರಣಾ ಸಾಂಸ್ಕೃತಿಕೋತ್ಸವ ‘ಸುರಭಿ ಜೈಸಿರಿ 2026’ ಕಾರ್ಯಕ್ರಮದ 2ನೇ ದಿನವಾದ ಶುಕ್ರವಾರ ಈ ಸಾಲಿನ ಬಿಂದುಶ್ರೀ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ವಿದ್ಯಾನ್ ಚಂದ್ರಶೇಖರ ನಾವಡ ಸುರತ್ಕಲ್ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ. ಅವರನ್ನು ಸನ್ಮಾನಿಸಲಾಯಿತು.
ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಕೃಷ್ಣಮೂರ್ತಿ ಮಂಜರು ಮಾರಣಕಟ್ಟೆ ಇತರರು ಪಾಲ್ಗೊಂಡಿದ್ದರು. ಸುರಭಿ ಸಂಸ್ಥೆಯ ಅಧ್ಯಕ್ಷ ಆನಂದ ಮದ್ದೋಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೂರ್ವಾಧ್ಯಕ್ಷ ನಾಗರಾಜ ಪಿ. ಯಡ್ತರೆ ಸ್ವಾಗತಿಸಿದರು. ಶ್ರೀನಿವಾಸ ಎಂ. ವಂದಿಸಿದರು. ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.